ಭರತಮಾತೆಯ ನುಡಿ
ಭರತಮಾತೆಯೆ, ಭರತಮಾತೆಯೆ, ಎಂದು ನೀ ತಲೆಯೆತ್ತುವೆ ?
ಎಂದು ಲೋಕದ ಜನದ ಹೃದಯದಿ ನಿನ್ನ ಮಹಿಮೆಯ ಬಿತ್ತುವೆ ?
ಎಂದು ಮಲಿನತೆ ನೀಗುವೆ-ಮಗು
ಳೆಂದು ನುಗುಮುಖವಾಗುವೆ ?
ಯಾರು ಮುಸುಕಿದ ಕಣ್ಣ ಮಂಜನು ತೆಗೆದು ಬೆಳಕನು ಬಿಟ್ಟರೋ,
ಯಾರು ಚಾಡ್ಯವ ಹರಿಸಿ ನಮ್ಮಲಿ ಹೊಸದು ಜೀವವನಿಟ್ಟರೋ,
ಅವರೆ ಕಣ್ಣನು ಹಿರಿವರೇ-ಕುದಿ
ದವರ ಕೊರಳನು ಮುರಿವರೇ !
ಎಲ್ಲಿ ಧರ್ಮವ ಕಂಡು ಸಾರಿದ ನಿನ್ನ ಪೂರ್ವದ ಋಷಿಗಳು ?
ಎಲ್ಲಿ ಘನತೆಯ ಬದುಕ ಹಾಡಿದ ಸಿನ ಸತ್ಯದ ಕವಿಗಳು ?
ಎಲ್ಲಿ ಧರ್ಮದ ಧಣಿಗಳು-ಅವ
ರಲ್ಲಿ ಜ್ಞಾನದ ಕಣಿಗಳು ?
ಎಲ್ಲಿ ಕಲೆಗಳ ಬೆಳಸಿ, ಲಕ್ಷ್ಮಿಯನೊಲಿಸಿ ನಿಲಿಸಿದ ಧೀರರು ?
ಎಲ್ಲಿ ರಾಜ್ಯವ ಕಟ್ಟಿ, ಶಾಂತಿಯ ಪ್ರಜೆಗೆ ಬೀರಿದ ವೀರರು ?
ಎಲ್ಲಿ ಆರರ ರಾಜರು-ಈ
ಗೆಲ್ಲಿ ಸಾಹಸ ತೇಜರು ?
ಭರತಮಾತೆಯೆ, ಭರತಮಾತೆಯೆ, ನಮ್ಮ ಹಂಬಲು ಕೇಳದೆ ?
ದೇವಿ, ಮೌನವಿದೇನು, ಭಕ್ತರು ನಮಗೆ ನೀತಿಯ ಹೇಳದೆ ?
ಎಂದು ಮಕ್ಕಳಿಗೊಲಿಯುವೆ-ನುಡಿ,
ಎಂದು ನಮ್ಮಲಿ ನಲಿಯುವೆ ?
೨
ನಿನ್ನ ಧರ್ಮದ ದಿವ್ಯಪಥದಲಿ ಬದುಕ ತಿದ್ದದೆ ಹೋದೆವು ;
ನಿನ್ನ ಸೇವೆಯ ಮರೆತು ನಮ್ಮ ಹೋರಿ ಸೋತವರಾದೆವು ;
ನಿನ್ನ ಹೆರರಿಗೆ ಕೊಟ್ಟೆವು-ನೀ
ನಿನ್ನು ಸಾಕದೆ ಕೆಟ್ಟೆವು.
ನಮ್ಮ ಮನೆಯಲಿ ನಾವು ಹೆರರಿಗೆ ದುಡಿವ ತೊತ್ತುಗಳಾದವು ;
ನಮ್ಮ ಹಿರಿಯರ ಪುಣ್ಯ ಕೀರ್ತಿಯನುಳಿಸಿಕೊಳ್ಳದೆ ಹೋದೆವು ;
ನಮ್ಮ ಬಾಳಿಸು, ಕೂಡಿಸು-ಸಲ
ಹಮ್ಮ, ಸದ್ಧತಿ ನೋಡಿಸು.
-ಮಕ್ಕಳಿರ, ಅಕ್ಕರೆಯ ಮಕ್ಕಳ, ಹೆತ್ತ ಕರುಳನು ಮರೆವೆನೆ ?
ಸೊಕ್ಕಿ ಸೆಡೆದವರೀಗ ತಿಳಿದಿರಿ, ಇನ್ನು ನಿಮ್ಮ ನು ತೊರೆವೆನೆ ?
ಕೇಳಿ, ಎದೆಯಲಿ ಹದಿಯರಿ-ಹೊಸ
ಆಳ ಬಾಳಲಿ ಹುರಿಯಿರಿ.
ದೇವ ಸನ್ನಿಧಿಯಿಂದ, ಮಕ್ಕಳ, ಮೊದಲು ಧರ್ಮವ ತಂದೆನು ;
ಜೀವಕಲೆಗಳ ಕಲಿಸಿ ಸುಖದಲಿ ಸೊಬಗ ಬೆಳಸುತ ಬಂದೆನು ;
ಹಿಮದ ಗಿರಿಯಲಿ ಸುಳಿದೆನು-ಕುಡಿ
ನಿಮಿರಿ ತೆರೆಗಳ ತುಳಿದನು.
ಹೊಳೆದ ಸತ್ವವ ಹಿಡಿದು ಮುಂದಕೆ ನೂಕಲಮ್ಮದೆ ಸೆಡೆದಿರಿ ;
ಹಳದ ನೆಮ್ಮತ ಜಾತಿಮತಗಳ ಮದದ ಗುಹೆಯಲ್ಲಿ ಕೆಡೆದಿರಿ ;
ಬಯಲ ಬೆಳಕಿಗೆ ಮುಳಿದಿರಿ-ಸಮ
ದಯದ ನಡತೆಯ ಹಳಿದಿರಿ.
ಮತ್ತೆ ಮತ್ತೊಡಹುಟ್ಟಿನೊಲುಮೆಯನೊರೆವ ಗುರುಗಳನಿಳುಹಿದೆ;
ಒತ್ತಿ ಗಡಿಗಳ ಹಲವು ನಾಡನು ಬೆಸೆವ ರಾಜರ ಕಳುಹಿದೆ;
ಮರುಗಿ ಆಗಚ್ಚತಿರಿ-ಮ
ತೊರಗಿ ಮುಸುಕನು ಹೊತ್ತಿರಿ.
೩
ಕಾವಲೊಡೆದೆನು, ಪಡುವ ಕಣಿವೆಯ ತೆರೆದು ಸುರಿದೆನು ದಳವನು ;
ದೈವಭಕ್ತಿಯ, ಭ್ರಾತೃಧರ್ಮದ, ಧೀರ ಮುಸ್ಲಮಕುಳವನು
ಚಿಮ್ಮಿ, ಕೆರಳಿಸಿ, ಕಲೆತರು-ಅಹ !
ನಿಮ್ಮ ಸಮಕೇ ಮಲೆತರು.
ಕಡೆಗೆ ನೆನೆದೆನು ನನ್ನ ಮನೆತನ ನೇರವಾಗುವ ತೆರವನು,
ಕಡಲ ರಾಣಿ ಬ್ರಿಟಾನಿಯಳ, ನನ್ನಿ ನಿಯ ತಂಗಿಯ ನೆರವನು ;
ಗೆಲಿದು ನಾಡನು ಬೆಸೆದಳು-ನೆಲ
ದೊಲುಮೆಕಟ್ಟನು ಹೊಸೆದಳು.
ಸಕಲ ಧರ್ಮದ ತಿರುಳ ಹೊರೆದಳು, ಸಕಲ ಜ್ಞಾನವ ತೆರೆದಳು ;
ಸಕಲ ಸೀಮೆಯ ಬಳಕೆಗೆಳೆದಳು, ಸಕಲ ಕುಶಲವನೊರೆದಳು ;-
ಅವಳ ಗುಣವನ್ನು ಮೆರೆಯಿರಿ-ಕಳೆ
ದವಳ ಕೊರತೆಯ ಮರೆಯಿರಿ,
ಮುರಿಯಲಾಕೆಯ ವ್ರತವನಸುರರ ಮಕ್ಕಳುರಿದುರಿದೆದ್ದರು;
ಹರಡಿ ನೆಲಸಿದ ಮಗಳ್ದಿರಣುಗರು ತಾಯ ಕಾಯುತ ಬಿದ್ದರು ;
ಅವರು ಮಡಿದೆಡೆ ಮಡಿಯಿರಿ-ಬಿಡ
ದವರು ಹಿಡಿದುದ ಹಿಡಿಯಿರಿ.
ಹಿರಿಯ ಸಿರಿಯೊಕ್ಕಲಲಿ ಹೊಕ್ಕಿರಿ, ನಂಟನಳಿಯದೆ ಬಲಿಯಿರಿ ;
ಅರುಹಿ, ನಯದಲಿ ಹೋರಿ, ನಂಬಿಸಿ, ಮನೆಯನಾಳಲು ಕಲಿಯಿರಿ.
ಶಿಷ್ಟ ಮಾರ್ಗದಿ ನಡೆಯಿರಿ-ನಿ
ಮ್ಮಿಷ್ಟಸಿದ್ಧಿಯ ಪಡೆಯಿರಿ.
ಮರಳಿ ಸುಗುಣರ ಕಾದ್ಯದಕ್ಷರ ಹೆತ್ತು ಕೊರಗನು ತಳ್ಳುವೆ ;
ಮರಳಿ ಮಹಿಮೆಯ ತೋರಿ ಲೋಕದ ಜನದ ಪೂಜೆಯ ಕೊಳ್ಳುವೆ;
ಮಕ್ಕಳಿರ, ನಿಮಗೊಲಿಯುವೆ-ನಿ
ಮ್ಮಕರೆಗೆ ಮಿಗೆ ನಲಿಯುವೆ.
೩
ಧರ್ಮ ಶಾಂತಿ ಸ್ವತಂತ್ರವಲ್ಲದೆ ನಮ್ಮ ಹಿರಿಯರ ನುಡಿಗಳು ?
ಧರ್ಮ ಶಾಂತಿ ಸ್ವತಂತ್ರವೇ ನನ್ನಿನಿಯ ತಂಗಿಯ ಮುಡಿಗಳು ;
ಕೂಡ ಲೋಕವ ಕಾಯುವ-ಯಶ
ಗೂಡಿ ಮುಕ್ತಿಗೆ ಹಾಯುವ!
-ಭರತಮಾತೆಯೆ, ಭರತಮಾತೆಯೆ, ನಿನ್ನ ಮಾತನ್ನು ಮರೆಯೆವು ;-
ಹಿರಿಯ ಬಳಗದ ಕಾರಚತುರೆಯ ಸಾಕುತಾಯಿಯ ತೊರೆಯವು ;
ಒಂದೆ ಜನವಾಗಿರುವೆವು-ಒಲಿ
ದೊಂದೆ ಭಾರವ ಹೊರುವೆವು.
ನಿನ್ನ ಹಿಂದಿನ ಭಾಗ್ಯವೆಲ್ಲವ ಮರಳಿ ಸಾಧಿಸಿ ಮೆರೆವೆವು ;
ನಿನ್ನ ಧರ್ಮಾಮೃತವ ಶೋಧಿಸಿ ಬರಡು ಲೋಕಕ್ಕೆರೆವೆವು ;
ದೈವಚಿತ್ತದಿ ನಿಲುವೆವ-ಸ
ತೇವೆಗೆಯ್ಯುತ ಸಲುವೆವು.
೧೯೧೪
===================================
ಮೈಸೂರು ಮಕ್ಕಳು
ನಿಮ್ಮ ನಾಡಾವುದು ?
ಮೈಸೂರು.
ನಿಮ್ಮರದಾವುದು ?
ಮೈಸೂರು.
ಕನ್ನಡದ ಕಣ್ಣದು,
ಮೈಸೂರು.
ನಾಲುಮಡಿ ಕೃಷ್ಣನ
ಮೈಸೂರು,
ಅಲ್ಲೆಲ್ಲಿ ನೋಡಿದರು ಬಾನ ಕರೆಯಲಿ ಹದುಗಿ ಕಾರ ಮುಗಿಲಂತಿಹುವು ಬೆಟ್ಟ ಹಬ್ಬಿ ;
ತೆರೆ ಎದ್ದು ಬಿದ್ದು ಬಹ ಬಯಲಲ್ಲಿ ಹಳ್ಳಿಗಳು, ತಾವರೆಯಕೆರೆ, ತೋಟ ಹೊಲದ ಹಸುರು;
ಕಾಡಿನಲಿ ನುಸಿಯುತ್ತ, ಕಲ್ಲಿನಲ್ಲಿ ಮೊರೆಯುತ್ತ, ಮರಳಿನಲ್ಲಿ ಸುಳಿಸುಳಿದು, ಸರಿಯ ದುಮುಕಿ,
ಪಯಿರುಗಳ ಬದುಕಾಗಿ, ಹೊಳಲುಗಳ ಬೆಳಕಾಗಿ, ಕಣ್ಣುಗಳ ಬೆರಗಾಗಿ ಹರಿವ ಹೊನಲು.
ಅಲ್ಲಿ ಅಲೆಯಲೆಯಾಗಿ ಬಂದು ನೆಲೆನೆಲೆಯಾಗಿ ನಿಂದು, ಹಲತೆರದಿಂದ ನುಡಿದು, ನಡೆದು,
ಕಡೆಗೆ ನಾಡೊಂದೆಂದು, ದೊರೆಯೊಬ್ಬ ನಮಗೆಂದು, ಬಾಳ ಬೆಲೆ ಹುದುವೆಂದು ಕಲಿತು, ಕಲೆತು,
ಜಾಣಿನಲಿ, ಚೆಲುವಿನಲಿ, ಸೊಗಸಿನಲಿ, ನಯದಲೌದಾಲ್ಯದಲಿ, ಕಾರೈದಲಿ ಕಳಶವೆನಿಸಿ,
ಮೆರೆಯುತಿಹ ಜನವ ನಾನೇನೆಂಬೆ, ಎಂತು ನಾ ಕನ್ನಡಿಗರೈಸಿರಿಯ ಬಣ್ಣಿಸುವೆನು.
ಚಿನ್ನದ ನಾಡದು,
ಮೈಸೂರು, ಗಂಧದ ಗುಡಿಯದು,
ಮೈಸೂರು,
ವೀಣೆಯ ಬೆಡಗದು,
ಮೈಸೂರು,
ನಾಲುಮಡಿ ಕೃಷ್ಣನ
ಮೈಸೂರು,
ಅಲ್ಲೊಬ್ಬ ನಮಗಿಹನು ನಾಯಕನು ; ಭಕ್ತಿಯಲಿ ನಿಲುಸಿಲುಕಿ ಕುಣ್ತುಂಬ ನೋಡುತಿರಲು,
ಆನೆಯಂಬಾರಿಯಲಿ ನಸುನಗೆಯನಿಕ್ಕೆಲಕೆ ಬೀರಿ, ಜನರಕ್ಕರೆಯನುಕ್ಕಿಸುವನು.
ಧೀರನಾತನು ; ತುಂಬುಗಾಂಭೀರದಲಿ ಸತ್ಯವನೆ ಎತ್ತಿ ನಿಲಿಸುವನು ಪ್ರಜೆಯ ತಂದೆ ;
ಮರೆತು ತನ್ನನು ರಾಜ್ಯ ಸೇವೆಯಲಿ, ಸಲಿಸುವನು ಧಮ್ಮವನು ರಾಜರ್ಷಿ ಕರ್ಮಯೋಗಿ.
ಬನ್ನಿ ಕೆಳೆಯರ, ನಮ್ಮ ಬಾಳಿಕೆಯ ಕಾಣಿಕೆಯನೊಪ್ಪಿಸುವ, ಕೈಕೊಳುವ ದೊರೆಯ ಗುರಿಯ ;
ನೋಹಿಯಾತನದು-ತನ್ನ ಮನೆಯ ಹಸಗೆಯ್ದು ಬೆಳಗಿದಂತೆಯೆ, ಬೆಳಗಿ ಊರ, ನಾಡ,
ಹಸಗೆಯ್ವೆ, ಹೊಸಗೆಯ್ವೆನೆಂಬೊಲುಮೆ ; ನಾವೆಲ್ಲರಾ ನಾಯಕನ ದಳದಿ ದೀಕ್ಷೆ ಪಡೆದು,
ಮೀರಿ ಬಳಸುವ ಬನ್ನಿ ಬುದ್ಧಿಯನು ಶ್ರದ್ಧೆಯನು ಕನ್ನಡಿಗರೈಸಿರಿಯ ಬೆಳೆಯ ಬೆಳಸಿ
ಬೆಳೆಯುವ ನಾಡದು,
ಮೈಸೂರು.
ಇಳೆಯ ಮಾದರಿಯದು
ಮೈಸೂರು.
ಕನ್ನಡಿಗನುಸಿರದು,
ಮೈಸೂರು.
ನಾಲುಮಡಿ ಕೃಷ್ಣನ
ಮೈಸೂರು,
===============================
ಕನ್ನಡ ಹೆಣ್ಣು
ಮೊದಲು ತಾಯ ಹಾಲ ಕುಡಿದು,
ಲಲ್ಲೆಯಿಂದ ತೊದಲಿ ನುಡಿದು,
ಕೆಳೆಯರೊಡನೆ ಬೆಳೆದು ಬಂದ
ಮಾತದಾವುದು-
ನಲ್ಲೆಯೊಲವ ತೆರೆದು ತಂದ
ಮಾತದಾವುದು-
ಸವಿಯ ಹಾಡ, ಕತೆಯ, ಕಟ್ಟಿ,
ಕಿವಿಯಲೆರೆದು, ಕರುಳ ತಟ್ಟಿ,
ನಮ್ಮ ಜನರು, ನಮ್ಮ ನಾಡು,
ಎನಿಸಿತಾವುದು-
ನಮ್ಮ ಕವಿಗಳೆಂಬ ಕೋಡು
ತಲೆಗದಾವುದು-
ಕನ್ನಡನುಡಿ, ನಮ್ಮ ಹೆಣ್ಣು,
ನಮ್ಮ ತೋಟದಿನಿಯ ಹಣ್ಣು ;
ಬಳಿಕ, ಬೇರೆ ಬೆಳೆದ ಹೆಣ್ಣು
ಬಳಿಗೆ ಸುಳಿದಳು ;
ಹೊಸದು ರಸದ ಬಳ್ಳಿ ಹಣ್ಣು
ಒಳಗೆ ಸುಳಿದಳು.
ಪಡುವ ಕಡಲ ಹೊನ್ನ ಹೆಣ್ಣು,
ನನ್ನ ಜೀವದುಸಿರು, ಕಣ್ಣು,
ನಲಿಸಿ, ಕಲಿಸಿ, ಮನವನೊಲಿಸಿ
ಕುಣಿಸುತಿರುವಳು ;
ಒಮ್ಮೆ ಇವಳು, ಒಮ್ಮೆ ಅವಳು,
ಕುಣಿಸುತಿರುವಳು.
ಹೀಗೆ ನನಗೆ ಹಬ್ಬವಾಗಿ,
ಇನಿಯರಿಬ್ಬರನ್ನು ತೂಗಿ,
ಇವಳ ಸೊಬಗನವಳು ತೊಟ್ಟು,
ನೋಡಬಯಸಿದೆ ;
ಅವಳ ತೊಡಿಗೆ ಇವಳಿಗಿಟ್ಟು
ಹಾಡ ಬಯಸಿದೆ.
ಬಲ್ಲವರಿಗೆ ಬೆರಗೆ ಇಲ್ಲಿ ?
ಅರಿಯದವರು ನಾಲ್ವರಲ್ಲಿ
ಕಳೆಯ ಬೆಳಕು ಹೊಳೆಯಲಂದು
ದಣಿದುಹೋದೆನು.
ಬಡವನಳಿಲುಸೇವೆಯೆಂದು
ಧನ್ಯನಾದೆನು.
೧೯೨೧.
=========================
ಶ್ರೀ ಕೃಷ್ಣರಾಜ ರಜತಮಹೋತ್ಸವ ಪ್ರಗಾಥ
೧
ಕಾಯಿ, ತಾಯಿ, ಕೃಪೆಯ ತೋರಿ
ನಮ್ಮ ಕೃಷ್ಣನ ;
ಬೆಳ್ಳಿಬೆಟ್ಟದೊಡತಿ, ಗೌರಿ,
ಬೆಳ್ಳಿಯೊಸಗೆಗೊಸಗೆ ಬೀರಿ
ಕಾಯಿ ಕೃಷ್ಣನ
ಏಳು, ವಾಣಿ, ವೀಣೆದಾಳು,
ಅಮೃತವಾಣಿಯಿಂದ ಹೇಳು
ಪುಣ್ಯದರಸು, ಧರ್ಮದಾಳು,
ದೊರೆಯ ಕೃಷ್ಣನ.
ಹೊನ್ನು ನಡೆಯ, ಹೊನ್ನು ನುಡಿಯ,
ಕನ್ನಡಿಗರ ವಯಿರಮುಡಿಯ,
ಒಡೆಯ ಕೃಷ್ಣನ.
೨
ಏನು ಲಲಿತಾದ್ರಿಯಲ್ಲಿ ಬೆಳಕುಗಳುಷೆಗೆ ಕಾಂತಿಯನೀವವು !
ಮೇಲಕೇರುವ ಬೆಳಕದಾವುದು ? ಇಳಿವ ಬೆಳಕುಗಳಾವವು ?
ಆವ ದೇವಿಯರಿವರು ಮೂವರು ?-ಕನ್ನಡದ ಸಿರಿಯೊಬ್ಬಳು,
ಅಕ್ಕತಂಗಿಯರಂತೆ ತಬ್ಬುತ, ಕಡಲ ರಾಣಿಯದೊಬ್ಬಳು,
ಶ್ರೀಭರತಮಾತೆಯರೊಬ್ಬಳು :
ತನ್ನ ಮಕ್ಕಳ ಬೀರಗನಸುಗಳುಬ್ಬುತಿರೆ ನಸುನಗುವಳು ;
ಭರತಮಾತೆ ! ಪ್ರೇಮಮಾತೆ !
ಮಹಿಮೆಯಲಿ ಕಳೆ ಮಿಗುವಳು.
ಗೌರಿಯೋಲಗದಿಂದ ಬಂದಳು, ಪೂರ್ಣಕುಂಭವ ತಂದಳು ;
ದೂರ ವಿನಯದಿ ನಿಂದ ಕನ್ನಡಹೆಣ್ಣ ಬಳಿಯಲಿ ನಿಂದಳು ;
ಕಳಶವಿಂತೆಂದಳು“-
ಬಾಳು, ಕನ್ನಡದರಸಿ, ಗೌರಿಯ ಕೃಪೆಯ ಸುಧೆಯನು ಚೆಲ್ಲಿಸು
ಕೃಷ್ಣರಾಜನ ಕೀರ್ತಿ ಹಬ್ಬಿದ ಚೆಲುವುನಾಡನು ಗೆಲ್ಲಿಸು.
ಕೃಷ್ಣರಾಜನ ಸಿರಿಯ ಮುಡಿಯಲಿ ಸಕಲಭಾಗ್ಯವ ಸಲ್ಲಿಸು.
ತನ್ನ ಬಾಳನು ನಾಡ ಮೇಲ್ಕೆಗೆ ಮುಡಿಪುಕಟ್ಟಿದ ಧೀರನು.
ತನ್ನ ಗುರಿಯನ್ನು ಬಿಡದೆ ಕೊಳುವನು, ಆತ್ಮಗಣದಲಿ ವೀರನು.
ಹೋಗು, ಸೊಬಗಿಯೆ, ಬಾಳು”-ಎಂದಳು.
ಬಳಿಯ ಕೆಳದಿಯ ಕೈಯ ಕೊಂಡಳು ;
ಮುಗಿಲ ಮರೆಯಲಿ ಸಂದಳು.
೩
ಮಂಗಳ ಮಸಗಿತು ಮೈಸೂರರಮನೆ ;
ಸಿಂಗರವಾಯಿತು ಮೈಸೂರು.
ಕೃಷ್ಣನ ವೈಭವವೆಲ್ಲವ ತೋರುವ, ಸಾರುವ, ಮೀರುವ ಮೈಸೂರು,
ನಾಲ್ಮಡಿ ಕೃಷ್ಣನ ಮೈಸೂರು,
ಬೆಟ್ಟವೊ, ಕೆರೆಯೋ, ಬೀದಿಯೊ, ಬನವೋ, ಮನೆಯೋ, ಮಹಲೋ, ಎಲ್ಲೆಲ್ಲು,
ದಟ್ಟಗೆ ಕೂಡುವ, ಭಕ್ತಿಯನಾಡುವ, ಹರ್ಷವ ತೋಡುವ ಸವಿಸೊಲ್ಲು,
ನಾಲ್ಮಡಿ ಕೃಷ್ಣನ ಸವಿಸೊಲ್ಲು.
ಎಳೆಯರು, ನಾಡಿನ ಬೆಳೆಸಿರಿಮೊಳೆಗಳು, ಆಡಿ, ಪಾಡಿ, ಕುಣಿಕುಣಿದಾಡಿ,
ಓದುವ ಹೆಣ್ಗಳು ಗಂಡುಗಳುಲಿವರು, ಸಸಿಯನು ನೆಡುವರು, ಕೊಂಡಾಡಿ,
ನಾಲ್ಮಡಿ ಕೃಷ್ಣನ ಕೊಂಡಾಡಿ.
ಅರಿವನು ಹರಡುವ ಸಿರಿಯನು ಬೆಳಸುವ, ಪರಿಪರಿ ಕೃಷಿಯನು ರೂಡಿಸುವ,
ತನ್ನೊಂದೊಲುಮೆಗೆ ಮರುಗಿಸಿ ಹಲಬಗೆ ನಾಡಿಗರೊಂದೆನೆ ಕೂಡಿಸುವ,
ಆಡುವ, ಹಾಡುವ, ಬರೆಯುವ, ಕೊರೆಯುವ, ಕಟ್ಟುವ ಕಳೆಗಳ ಹೂಡಿಸುವ,
ಹೊಸ ಹೊಸ ತೆರದಲಿ ಮನವನು ಮುಟ್ಟುವ ಕವಿಗಳಿಗುತ್ಸವಮಾಡಿಸುವ,
ಪ್ರೇಮದ ಸ್ವಾಮಿಗೆ, ಕೃಷ್ಣಗೆ, ಹಿರಿಯರು ಬಿನ್ನ ಹಗೈವರು ತಲೆಬಾಗಿ,
ನೆಚ್ಚಿನ ಮೆಚ್ಚಿನ ಬಿನ್ನಹ ಕರಗಿಸೆ, ಹೃದಯವನೆರೆವನು ಮುಡಿಪಾಗಿ,
ನಾಲ್ಮಡಿ ಕೃಷ್ಣನ ಮುಡಿಪಾಗಿ.
ಕನ್ನ ಡದೇವಿಯ ಬಯಕೆಯ ಕಳಶದ ಸುಧೆ ಸುರಿದೆತ್ತಲು ಚೆನ್ನಾಯ್ತು ;
ಪ್ರೇಮದ ಸ್ವಾಮಿಯ ಕೃಷ್ಣನ ಭಕ್ತಿಯ ರಸ ಹರಿದೆತ್ತಲು ಹೊನ್ನಾಯ್ತು.
ಮಂಗಳಮಯವಾಯಿತು ನಾಡು ;
ಸಿಂಗರದಾ ಕನ್ನಡನಾಡು.
ಪಡುಗಡಲಿನ ತೆರೆ ಮುದ್ದಾಡುವ ಕರೆ, ಹೊಳೆ ಹಾಲಿಳಿಯುವ ಘಟ್ಟದೆಡೆ,
ಪಂಪನ ರನ್ನನ ಪುಟವಿಡಿಸಿದ ಕಡೆ, ಹಂಪೆಯ ತಾಂಡವವಾಡಿದೆಡೆ,
ಹೊಯ್ಸಳರೆತ್ತಲು ಕಡೆಯಿಸಿ ನಿಲಿಸಿದ ಗುಡಿಗಳ ಸೊಬಗಿನ ಕಣ್ಣ ಸೆಳೆ,
ಜಲಜಲನುಕ್ಕುವ ಕಾಲುವೆ ಬಯಲಲಿ ಪಚ್ಚೆಯ ಪಯಿರಿನ ತುಂಬುಬೆಳೆ-
ಮಂಗಳಮಯ ತಾನೆತ್ತಲು ನಾಡು,
ಸಿಂಗರದಾ ಸಿರಿಗನ್ನಡನಾಡು.
ಅತ್ತಲು, ತಾನೆತ್ತಲು, ಒಮ್ಮನ, ಒಕ್ಕೊರಲಾಗುತ ಜನ ಕೂಡಿ,
ನಿರ್ಮಲಚಿತ್ತನ, ಪುಣ್ಯ ಚರಿತ್ರನ, ಕೃಷ್ಣನ ಹರಸುತ ಜನ ಹಾಡಿ,
ಜಯ, ಜಯ ಎಂಬರು, ಬೆಳೆ ಬಾಳೆಂಬರು,
ನಿನ್ನದು ಕನ್ನಡದೆದೆಯೋಲವೆಂಬರು-
ಮಂಗಳ ಮಸಗಿತು ಮೈಸೂರರಮನೆ ; ಧನ್ಯತೆ ಪಡೆಯಿತು ಮೈಸೂರು,
ಕನ್ನಡನಾಡಿನ ಮನ್ನಣೆ ಪಡೆಯಿತು ನಾಲ್ಮಡಿ ಕೃಷ್ಣನ ಮೈಸೂರು.
೪
ಎಂತೆನ್ನ ಬಗೆ ಹಾರುವದು ನೆಗೆದು ಸಂದು
ಮೈಸೂರ ಮೊತ್ತಮೊದಲೊಸಗೆ ಬೆಳೆದಂದು !
ಸೆರೆಯಿಟ್ಟು ಕಾಡಿದಾ ಖಳನನು ಕೊಂದು,
ಅರಸರರಸಿಯರೆಲ್ಲ ಹರಸುತಿರೆ, ಬಂದು,
ಕೈ ಹಿಡಿದ ರಾಣಿಯನು ನಗುತ ಕರೆತಂದು,
ಮುದ್ದಾದ ಮೈಸೂರ ತಾವರೆಯ ತಂದು,
ದೇವಿ ಚಾಮುಂಡಾಂಬೆಯದಿರಿನಲಿ ನಿಂದು,
ಕೈಮುಗಿದು ಬೇಡಿದನು ಯದುರಾಯನಂದು :
“ ಕಾಯಿ, ತಾಯಿ, ಕೃಪೆಯ ತೋರಿ,
ನಿನ್ನ ಮಗನನು ;
ನಲುಗಿ, ನಿನ್ನ ನೆರಳ ಸೇರಿ
ನಲಿವ ಹೆಣ್ಣನು.
ಧರ್ಮದೊಲವ ನಮಗೆ ನೀಡು,
ಸತ್ಯ ನಿಲಿಸುವಂತೆ ಮಾಡು,
ಹಿರಿಯ ಮೈತ್ರಿಗಳನು ಕೂಡು,
ಕರುಣದಿಂದ ಬಿಡದೆ ನೋಡು,
ಕಾಯಿ, ತಾಯಿ, ನಮ್ಮ ನಾಡು,
ನಮ್ಮ ಮನೆಯನು,
ನಡಸಿ ಬೆಳಸಿ, ಹಿರಿದುಮಾಡು
ನಮ್ಮ ಮನೆಯನು.'
೫
ಇಂತೆಂದು ಬೇಡಿದನು ಮೈಸೂರ ಮನೆತನದ ಮೊದಲಿಗನು ಬಾಗಿ,
ಮನಮುಳುಗಿ ಭಕ್ತಿಯಲಿ, ಚಿತ್ರದಾಳುಗಳಂತೆ ನಿಶ್ಯಬ್ದವಾಗಿ,
ಮೂಡುವಚ್ಚರಿಹದವ ಹಾರುತ್ತ, ಸಭೆಯಲ್ಲ, ಎವೆಹೊಯ್ಯದಲ್ಲಿ
ನಿಂದಿಹುದು, ಅಹ ! ಅಲುಗಿತಭಯಹಸ್ತದ ಹೂವು ; ಸಿಡಿದು ಮುಡಿಯಲ್ಲಿ
ನೆಲಸಿದುದು, ಯದುರಾಯಮಕುಟದಲಿ, ದೇವಿಕೆರೆ ಸಂಪಗೆಯದೊಂದು.
ಕೂಗಿದಳು ನೆರವಿಯಲ್ಲಿ ಮುತ್ತೈದೆ, ಬೆದರಿದಳು ಮೈಮೇಲೆ ಬಂದು,
ಕೆದರಿದಳು ಬಿರಿದಲೆಯ ನರೆನವಿರ, ಬಿರುಬಿರನೆ ಕಣ್ತೆರುಹಿ, ನಕ್ಕು,
ಕದಡುಬಗೆ ತಿಳಿಯಾಗಿ, ದೂರದೆಸೆ ಬಳಿಯಾಗಿ, ಮುಂದಹದ ಹೊಕ್ಕು,
ನುಡಿದಳವಳಂದು-
ಹಣ್ಮುದುಕಿ ನೋಟವನು ನುಡಿದಳವಳಂದು-
ಗಿರಿಯ ನೆತ್ತಿಯ ಮೇಲೆ ಗಂಭೀರಘೋಷದಲಿ ಗುಂಪಿನೆಲಿ ಒಂದು
ಮಳೆ ಕುಡಿವ ಹಕ್ಕಿ ವೊಲು ಕುಡಿಯುತಿರೆ ಕನ್ನಡದ ಕಲಿಗಳಾ ಸಿರಿಯ,
ಪಾವನದ ಮುತ್ತೈದೆ ಸವಿಗರೆದು ನುಡಿದಳಾ ಮೈಸೂರ ಸಿರಿಯ,
ಕನ್ನಡದ ನಾಡ ಸಿರಿಯ.
೬
" ಮೆಚ್ಚಿದೆನು, ಮೆಚ್ಚಿದೆನು, ವಿಸಯನಿಧಿ ; ನನ್ನೊಲುಮೆಗುವರಿ, ಈ ಅರಸಿ,
ಚಿಕ್ಕದೇವಾಂಬೆಯನು ದುಃಖವಾವರಿಸುತಿರೆ, ಅದ ನಿನ್ನ ಕರಸಿ,
ಪರಿಹರಿಸಿ, ರಾಜ್ಯವನು ನಿನ್ನ ತೋಳಿನಲಿರಿಸಿ ಕಾಯುವೆನು, ಬಾಳು.
ಕೃಷ್ಣದೇವನ ಕುಲದ ನೆಲದರಿಕೆಯಾಳಿಕೆಯ ಹೆಮ್ಮೆಯಿಂದಾಳು.
ನಿನ್ನ ಮಕ್ಕಳ ಸಾಲು ಕುಡಿಯೊಡೆದು ಹಬ್ಬುವುದು, ಬೆಳಗುವುದು ಬೀಡು ;
ಕಡೆಗಾಣದಂತೆಂತು ನಿಮಿರುವುದು ಯಾದವರ ಸಂತಾನ, ನೋಡು ;
ಕರ್ನಾಟಚಕ್ರವರ್ತಿಗಳು ಹೊಳೆಹೊಳೆಯುತಿಹರೆಂತು ಹಸರಾಂತು !
ರಾಜೊಡೆಯ, ನರಸಿಂಹ, ಚಿಕದೇವ, ಮುಮ್ಮಡಿಯ ಕೃಷ್ಣಂದ್ರನಿಂತು,
ಹೊಸಯುಗದ ಚಾಮೇಂದ್ರ-ಹಿರಿಯರೆಲ್ಲರ ಪುಣ್ಯ ಫಲಿಸಿ ಬಂದಂತೆ.
ನಿರ್ಮಲದ ಗಗನದಲಿ ನೆಲಸಿ ಶಾಂತಿಯೊಳಿರುವ ಚಂದ್ರನೆಂಬಂತೆ,
ನಾಲ್ಮಡಿಯ ಶ್ರೀ ಕೃಷ್ಣ-ಶ್ರೀ ಕೃಷ್ಣ-ಸಾಕೆನಿತು ಮಾತಿನಿತು ಸಾಕು.
ಪರಮತೇಜಸ್ವಿಗಳು, ರಣಧೀರರಪ್ರತಿಮವೀರರಾಗಿದ್ದು,
ಚಕ್ರವನ್ನು ತಡೆಯಿಲ್ಲದೋಡಿಸುತ, ಆಡುತ್ತ ದುರ್ಗಗಳ ಗೆದ್ದು,
ಯುದ್ಧಕಾನಂದಿಸರು ; ಕತ್ತಿಹೊಳಪನು ಚಿನ್ನ ದೊರೆಯೊಳಗೆ ಮರಸಿ,
ತೊಡವೆನಿಸಿ ಮಡಗಿಹರು, ಶಾಂತಿಯಲಿ ಮನಸೋತು ಸಾತ್ವಿಕವನರಸಿ.
ಸೌಮ್ಯಮೂರ್ತಿಗಳವರು, ಸಾಧುಗಳು, ಪ್ರೇಮಿಗಳು, ಭಕ್ತಿಬೋಧಕರು,
ಕಾವ್ಯರಸಿಕರು, ಗಾನಕೌಶಲರು, ಕಲ್ಯಾಣಕಾರ್ಯಸಾಧಕರು.
ಗುರುಗಳನ್ನು ಹಲವರನು ಸೇವಿಸುತ್ತ, ಧರ್ಮಸಾರವನ್ನು ಕಡೆಯುವರು,
ಸ್ವಾಮಿಭಕ್ತಿಯೊಳೆರಡನೆಣಿಸದೆಯೆ, ತನ್ನೊಡೆಯತನವ ನಡೆಯುವರು.
ಬ್ರಹ್ಮದಲಿ, ಕ್ಷಾತ್ರದಲ್ಲಿ, ನೀತಿಯಲ್ಲಿ, ನೆರೆ ಪಳಗಿ ಮೈಮೆವೆತ್ತಿಹರು.
ಒಮ್ಮೆ ನಾಡನು ತಿರುಗಿ ಹಳ್ಳಿಗರ ನೆಮ್ಮದಿಯ ನೇರ್ಪಡಿಸುತಿಹರು.
ಒಮ್ಮೆ ಹೊಳಲನು ಮೆರೆದು ಮಿತ್ರರಾಜರ ಬರಿಸಿ ಸುಖಗೊಳಿಸುತಿಹರು.
ಹೊಳೆಗಳನು ತಡೆಗಟ್ಟಿ ಬೆಂದ ಕಾಡನು ಬೆಳಸಿ ಹಸುರೆರಚುತಿಹರು.
ಬೆಟ್ಟದಲ್ಲಿ ವಿಹರಿಸುತ ಜಾತ್ರೆಗಳ ಸಂಭ್ರಮಕೆ ಸಡಗರಿಸುತಿಹರು.
ಜ್ಞಾನಿಗಳ ಗೋಷ್ಠಿಯಲ್ಲಿ ಕೇಳುವರು, ಬರಸುವರು, ತಾವೆ ಬರೆಯುವರು.
ಪ್ರಜೆಗಳೊಲುಮೆಯ ಸೆಳೆದು, ರಾಜರಲಿ ಗಣ್ಯತೆಯ ಪಡೆದು ಮೆರೆಯುವರು.
ಮೈಸೂರರಸರ ಮೊದಲಿಗ, ನೋಡು,
ಇಂತಹ ದೊರೆಗಳ ಸೇರಿದ ನಾಡು,
ಸಿಂಗರದಾ ಸಿರಿಗನ್ನಡನಾಡು,
ಮಂಗಳಮಯದಾ ನನ್ನೀ ನಾಡು,
ಕಂದದು, ಕುಂದದು, ಕೊರಗದು, ನೋಡು,
ಮೈಸೂರರಸರ ಅರಮನೆ, ನೋಡು
ಉರಿ ಕೊಳೆ ಸಗ್ಗದೆ ಶಿಲೆಯಲಿ ಬೀಡು
ಉರಿಯನೆ ಹೊದೆಯುತ ನಗುವುದು ನೋಡು,
ಹೊಳೆವುದು, ಬೆಳೆವುದು, ಸೆಳೆವುದು, ನೋಡು,
ಸುಖದಲಿ ನೆರೆದಾ ಜನವನು ನೋಡು.
ನಾಲ್ಮಡಿ ಕೃಷ್ಣನ ಹರಸುವರು !
ಆತನ ಸುಖದಲಿ ಬೆರಸುವರು ;
ಇಂತಹ ಜನವನ್ನು, ನಾಡನು, ದೊರೆಯನು
ನಾನೆಂದೆಂದೂ ಹರಸುವೆನು,
ನಾನೆಂದೆಂದೂ ಕಾಯುವೆನು,
ಕಾಯುವೆನು.”
೭
ಕಾಯಿ, ತಾಯಿ, ಗೌರಿದೇವಿ, ಕೃಷ್ಣರಾಜನ !
ಬೆಳ್ಳಿ ಬೆಟ್ಟದೊಡತಿ, ಗೌರಿ,
ಬೆಳ್ಳಿಯೊಸಗೆಗೊಸಗೆ ಬೀರಿ
ಕಾಯಿ ಕೃಷ್ಣನ
ಕನ್ನಡಿಗರ ವಯರಮುಡಿಯ ರಾಯ ಕೃಷ್ಣನ !
೧೯೨೭.
===================================
ಕನ್ನಡತಾಯ ನೋಟ
(ವಿಜಯನಗರ ಸಾಮ್ರಾಜ್ಯದ ಆರುನೂರು ವರ್ಷದ ಹಬ್ಬದಲ್ಲಿ)
೧
ಹಿರಿಯರಿರ, ಕೆಳೆಯರಿರ, ಅಕ್ಕತಂಗಿಯರಾ, ಅಣ್ಣತಮ್ಮದಿರಾ,
ಒಸಗೆನುಡಿ ತಂದಿಹೆನು ನಾನೊಂದ, ತಾಯಿಂದ, ಸಿರಿಯ ತಾಯಿಂದ-
ಕೇಳುವಿರ ಕಿವಿಗೊಟ್ಟು, ತಾಳುವಿರ ಎದೆಸಿಟ್ಟು, ತಾಳಿ ಬಾಳುವಿರಾ ?
ಕಣ್ಣಾರ ಕಂಡೆನವಳನು-ಕಂಡು, ತಂದಿಹೆನು, ಕೇಳಿ,
ಅವಳನ್ನೊ ಳಾಡಿದುದನಾಡುವೆನು ನಿನ್ನಲ್ಲಿ, ಕೇಳಿ.
೨
ಬಳಸಿ ಬಂದೆನು ಸುತ್ತ ಕನ್ನಡದ ನಾಡುಗಳ ಸಿರಿಯ ನೋಡುತ್ತ,
ತಾಯಡಿಯ ಹುಡಿಯ ತಲೆಗಾನುತ್ತ, ಹರಕೆಯ ಪವಿತ್ರ ಯಾತ್ರೆಯಲಿ.
ಏನು ಚೆಲುವಿನ ನಾಡು ! ಚೆಲುವು ಚೆಲ್ಲುವ ನಾಡು ! ಕನ್ನಡದ ನಾಡು !
ಏನು ಚಿನ್ನದ ನಾಡು | ನನ್ನೊಲುಮೆಯಾ ನಾಡು ! ನಮ್ಮಿನಿಯ ನಾಡು !
ಕಾವೇರಿಯಿಂದಮಾ ಗೋದಾವರಿಯ ವರೆಗೆ ಚಾಚಿರುವ ನಾಡು !
ಬಳಸಿದೆನು, ಸುತ್ತಿದೆನು, ಕಣ್ಣಣಿಯ ನೋಡಿದೆನು, ಕುಣಿದು ಹಾಡಿದೆನು:
ಕೆಳಗೆ ಬೆಳೆಹೊಲ ಕಪ್ಪು, ಮೇಲೆ ಬಾಂಬೂಲ ಕಪ್ಪು, ಬೆಟ್ಟಗಳು ಕಪ್ಪು,
ಕಾರ್‌ಮೋಡಗಳು ಕಪ್ಪು, ಹೊಳೆ ಕೆರೆಯ ಮಡು ಕಪ್ಪು, ತಾಯ ಕಾಲ್ ತೊಳೆವ
ಉಪ್ಪು ಕಡಲದು ಕಪ್ಪು, ಜನ ಕಪ್ಪು-ಏನೆಂದೆ ? ತಪ್ಪು, ತಪ್ಪು !-
ಮೂಡ ಪಡುವಲು ತಿರುಗು, ಬಡಗ ತೆಂಕಲು ತಿರುಗು, ಕರ್ನಾಟದಲ್ಲಿ,
ನಿಮೂರ ಹೆಣ್ಣುಗಳ ಕಣ್ ನೋಟ, ತಣ್ನೋಟ ಕರ್ಪೂ, ಒಲು ಕರ್ಪು !
ಕರ್ಪೊ, ಬೆಳ್ಳಿ ಕಾಣೆ, ಕನ್ನಡದ ಕಣ್ಣೋಟ-ಕೂರ್ಪು, ಆರ್ಪು !
ಓ ತಾಯೆ, ಕನ್ನಡದ ಸೆರ್ ತಾಯೆ, ನಮ್ಮಮ್ಮ, ದೇವಿ, ಸಮ್ರಾಜ್ಞೆ.
ಸುಳಿಗುರುಳು, ನಗೆಗಣ್ಣು ಏನು ಕಪ್ಪೇ ನಿನಗೆ-ಮುತ್ತಿಡುವ ಕಪ್ಪು !
ನಿನ್ನ ಕಲಿಗಳ ಕೂರ್ಪು, ಕೆಚ್ಚೆದೆಯ ಕಟ್ಟಾಳ ಕೂರ್ಪು, ನೆಚ್ಚಾರ್ಪು,
ಆರು ತಡೆಯಲುಬಹುದು-ಪುಲಕೇಶಿ ಹರ್ಷರೇ ಹೊಯ್ತು ಸಾರುವರು.
ಕರ್ಪಿರಲಿ, ಕೊರ್ಪಿರಲಿ, ನಿನ್ನ ಬೆಳ್ಳನು ಹೇಳು-ಕರಸಿಯ ಮಿಂಚು,
ಕಾರ್ ಮಿಂಚು, ಹೆಣ್ಮಣಿಗಳಾ ಕಣ್ಣ ಸುಂಚು, ಅರಿದರಾ ಕೂರ್ ನೋಟ ಮಿಂಚು !
ಮೆಲ್ಲ ಮೆಲ್ಲನೆ ತೇಲಿ, ಆಳದಲಿ ಮಲೆಯೆಡೆಯೊಳಲುಗದೆಯೆ ಅಲುಗಿ,
ಕಡಿದು ಬಂಡೆಗೆ ಬಂದು, ನೆಗೆದು ಬೆಳಂಗೆಡೆವ ನೀರ್ ಬೀಳು ಬೆಳ್ಪು !
ಕಡೆದ ನೊರೆ, ಚಿಗಿವ ನೊರೆ, ತೂರು ನೊರೆ, ಕುದಿವ ನೊರೆ, ಬೆಳ್ಳಿ ನೋಳ್ ಬೆಳ್ಳು !
ಆ ಬೆಳ್ಪು, ಆ ತೆಳ್ಪು, ಆ ಮಲ್ಪು -ನಿನ್ನ ಮಕ್ಕಳ ಬಾಳಿನೊಳ್ಪು ;
ನೀರ್ ಬೀಳ ಬೆಳ್ತರೆಯ ಬಿಸಿಲ ಬೆಟ್ಟಿಂಗಳಾ ಮಳೆಬಿಲ್ಲ ತಳ್ಪು !
ಬೆಳ್ಗೊಳವೊ, ತೀರ್ಥಗಳೊ, ಧರ್ಮಧರ್ಮದ ತಿರುಳೊ, ಪಾಡುವರ ಪುರುಳೋ,
ಒಳ್ಗನ್ನಡದ ಕಲೆಯೊ, ಕುಸುರಿಗೆಲಸದ ಸಿಲೆಯೊ, ಆ ನಯವೊ, ಮೆರುಗೋ !
ನಿನ್ನ ಚಿಣ್ಣರ ಸೊಬಗೊ, ಬೆಡಗೊ, ಮೆಲ್ಲೆದೆ ತನ್ಪೊ, ಕೊಡುಗೈಯ ಬಿಣ್ಪೋ !
ಓ ಎನ್ನ ತಾಯಿ, ಕನ್ನಡ ತಾಯಿ, ನಮ್ಮವ್ವ, ದೇವಿ, ಸಮ್ರಾಜ್ಞೆ,
ನಿನ್ನ ನರಸುತ ಸುಳಿವ, ನೋಂಪಿಯೆನೆ ನಿನ್ನೊಲುಮೆನಾಡನೊಳಕೊಳುವ,
ನಿನ್ನ ಚೆಲುವನು ಸವಿವ ಮಗುವಾರು ತಣಿಯದನು, ಹಾಡಿ ಕುಣಿಯದನು,
ಭಕ್ತಿಯಲಿ ತಲೆದೂಗಿ ಬಾಗಿ ಮಣಿಯದನು !
೩
ಚೆಲುವು ಕಣಿ ಕಾರ್ವಾರವೆದೆ ತುಂಬಿ, ಗೋಕರ್ಣದಲ್ಲಿ ಮಿಂದು, ಸಂದು,
ಉಡುಪಿಯಲ್ಲಿ ಕೃಷ್ಣಂಗೆ ಕೈ ಮುಗಿದು, ಮಂಗಳೂರಿನ ಹಿರಿಯ ನಂಟರಲಿ ನಿಂದು,
ಚಾರ್ಮಾಡಿ ಘಾಟಿಯನು ಬಳಬಳಸಿ ಮೇಲೇರಿ ಬಂದವನು ಕಂಡೆ ಕಂಡೆ !
ಮೇಲೆ ತಿಳಿಯಾಕಾಶ, ಸುತ್ತಲೂ ಬೆಟ್ಟಸಾಲ್ ತೋಳ ತೆಕ್ಕೆಯಲಿ
ಕಣಿವೆಯೇರುವ ಕಾಡು, ದಟ್ಟಡವಿ, ಒಮ್ಮೊಮ್ಮೆ ಹಕ್ಕಿಗಳ ಹಾಡು,
ಮರದ ಮರೆಯಲಿ ದುಮುಕುವಬ್ಬಿಗಳ ಹಬ್ಬಿ ಹರಡಿದ ಕೂಗು ಕೊರಲು !
ಕಂಡೆನಾಕೆಯನಲ್ಲಿ, ದೂರದಲಿ, ಕಣ್ ಪುಣ್ಯ ಮಿಂಚಿ ಮರೆಯಾಯ್ತು !
ಕನ್ನಡದ ಆ ನೋಟ, ದೇವಿಯಾ ದರ್ಶನಂ ಪೊಳೆದು ಬಯಲಾಯ್ತು !
ಎವೆ ಹೊತ್ತಿನಾ ನೋಟ, ಸವಿನೋಟ, ಸವೆಯದೆದೆಚಿಮ್ಮುತಿಹುದಿನ್ನೂ !
ಅಮೃತಲೋಕದ ಮಾತೆ, ಅಳಿಯದಳ್, ಬಾನ್‌ಬಾಳ ಪೆರ್ಮೆಗಳ ತಾಯಿ,
ತಲೆಯಲ್ಲಿ ಪೊನ್ನ ಮುಡಿ, ಹದಿದರಿಲ ಪೊಂಪು, ಬೆಳ್ದಾವರೆಯ ಪೊಂಗಯ್ !
ಸುತ್ತಲುಂ ಪೊನ್ನಾಡ ಕನ್ನಡದ ಪೆರ್ಮೆನಡಿಗಳ್, ಸಾವನೊದೆದು ಬೆಳಗಿ,
ಕನ್ನಡದ ಮಕ್ಕಳ್ಗೆ ಕನ್ನಡದ ಪಾಲೆರೆದು, ಬಾಳ್ಗೆ ಬಾಳ್ ಪೊಯ್ದು,
ಬಾಳ್ವವರು ಮೆರೆವವರು,-ಪೆರ್ ನೋಟ ! ಪಿರಿಯ ತಾಯ್ ಹಿರಿಯ ಮಕ್ಕಳ್ !
ಕಪ್ಪು ಹೆಪ್ಪಿನ ಕುರುಳ ಕರ್ಮುಗಿಲ ಬಸಿರಿಂದ ತೊಟ್ಟನೊಡೆಹೊಮ್ಮಿ,
ಬಾನ ಈ ಕರೆಯಿಂದ ಆ ಕರೆಗೆ ಚಿಮ್ಮಿ ಒಡನಡಗುವುದೆ ತೇಜಂ,
ಆ ತೇಜದುರಿಯಂತೆ ಕಣ್ಣುಳ್ಕಿ, ಹೊರಗಡಗಿ, ಒಳಗಿರ್ಪುದಿನ್ನು೦.
ಇದೊ ಬಂದೆನೀ ಹಾಳು ಹಂಪೆಂದರಸುತ್ತ-ಒಳಗಿರ್ಪುದಿನ್ನುಂ-
ಒಳಗಿದ್ದು ಹೊರಗಣ್ಗೆ ಕಾಣಿಪುದು ಮತ್ತೊಮ್ಮೆ ಆ ತಾಯ ನೋಟಂ.
ತುಂಗಭದ್ರೆಯ ತಡಿಯ ಚೆದರಿರುವ ಮೊರಡಿಗಳ ಕೊರಕಲಿನ ಬಿಸಿಲ
ಬೇಗುದಿಯ ಬಿರುಕಿನಲಿ ಮುಳ್ಳೆಡೆಯ ಕಲ್ಲುಹೂವಿಡಿದರೆಯ ಮೇಲೆ,
ಕುಳಿತಿದ್ದಳಾ ತಾಯಿ, ಕೈಮೇಲೆ ತಲೆಯೂರಿ, ಅಳಲಿನಾಳದಲಿ !-
“ಯಾರವ್ವ, ನೀ ತಾಯಿ ? ಏತಕಿಂತೊಬ್ಬಳೇ ಕುಳಿತೆ ಕಾಡಿನಲಿ ?
ಏಕೆ ಮೊಗ ಬಾಡಿಹುದು, ಕಂದಿಹುದು, ನೊಂದಿಹುದು, ಕಾಂತಿಗುಂದಿಹುದು ?”
ಕಂಬನಿಗಳರುತಿಹ, ಕಳವಳದ, ಕೂರ್ಮೆ ನಡುಗಿಪ ನುಡಿಯ ಕೇಳಿ,
ಕತ್ತೆತ್ತಿ, ಪಳಮೆಯಾಳದ ಕಣ್ಣನೆನ್ನ ಕಣ್ಣಲಿ ನೆಟ್ಟು, ಕಯ್ಯ
ಕುಳ್ಳಿರಲು ಸನ್ನೆ ಗೈದೀ ಪರಿಯೊಳಾಡಿದಳು, ತೋಡಿದಳು ತೊಳಲ-
ಕಣ್ಣಾರ ಕಂಡುದನು, ತಾಯೆನ್ನೊಳಾಡಿದುದನಾಡುವೆನು, ಕೇಳಿ.
ಕಿವಿಗೊಟ್ಟು ಕೇಳಿ:
ಎದೆಗೊಟ್ಟು ಕೇಳಿ :
ಏಳಿ, ಎಚ್ಚರವಾಗಿ, ಅರಳಿ ಬಾಳಿ !
೪
“ ಕೇಳಣ್ಣ, ನಾನೊಬ್ಬ ಹಳೆಯ ಮುತ್ತೈದೆ-ಹಿರಿದಾಗಿ ಬಾಳಿದವಳೊಮ್ಮೆ :
ಈಗ ಬಡತನ, ಬಡವೆ, ಬಡವಾದೆ : ಬಡವಾದ ಮಕ್ಕಳನ್ನು ನೋಡಿ,
ಬತ್ತಿ, ಮತ್ತಿಮ್ಮಡಿಯ ಸೊರಗಿನಲಿ ಬಡವಾದ-ಸಾವಿಲ್ಲ ನನಗೆ !
ಸಾವಿಲ್ಲ-ಸಾಯುತಿಹೆ: ಹೊಸ ಮಳೆಗಳಾಗಿ, ನೆಲ ಹೊಸ ಹೊನಲು ಹರಿದು,
ಹೊಸ ಹಮ್ಮು ಹಮ್ಮು, ಎಲ್ಲರೂ ನನ್ನ ಕ್ಕ ತಂಗಿಯರು ಚಿಗುರಿ
ಎಲ್ಲರೂ ಚೆಲುವಾದರೆಲ್ಲರೂ ಚಿನ್ನ ವಾದರು-ನೋಡು, ನೋಡು-
ಆ ಕಡೆಗೆ, ಈ ಕಡೆಗೆ ತೂಗುವರು ತೊನೆಯುವರು, ಆ ಪೊಂಕ, ಬಿಂಕ !
ಪೇರೊಕ್ಕಲಾಗಿ ಪಾಡುವರು ;
ಅವರ ಮಕ್ಕಳು ಬೆಳೆದು ಕಳೆಗೂಡಿ ಮನೆ ಬೆಳಗಿ ಹಬ್ಬ ಮಾಡುವರು-
ತಾವ್ ಮೊದಲು ಬದುಕಿ,
ತಾಯ್ ಮೊದಲು ಬದುಕಿ,
ಹೆರರ ಹೊರೆಗಳನಿಳಿಸೆ, ಹೆರರ ಸೆರೆಗಳ ಬಿಡಿಸಿ, ಕಯ್ಯ ನೀಡುವರು.
ಆ ಸಯ್ಪು, ಆ ಪುಣ್ಯ, ನನಗಿಲ್ಲ : ನನ್ನ ಮಕ್ಕಳಿಗಿಲ್ಲ ಹಬ್ಬ=
ನನ್ನ ಮಕ್ಕಳಿಗಿಲ್ಲ ಹಬ್ಬ :
ಮಳೆ, ಸುಗ್ಗಿ ; ಬೆಳೆ, ಬೆಳಕು ; ಹಾಡು, ಹಸೆ ; ಕೂಗಾಟ, ಕುಣಿದಾಟ, ಪಾಟ;
ಒಲೆದಾಟ, ನಲಿದಾಟ, ಒಲುಮೆ ಬೀರಾಟ,
ನನ್ನ ಮಕ್ಕಳಿಗಿಲ್ಲ-ನನಗಿಲ್ಲ-ಬಾಳೆ ಆ ಅಕ್ಕ ತಂಗಿಯರು !
ನಮಗಿಲ್ಲ ಬಾಳು.
ಎಲ್ಲರೂ ಬಾಳುವೆಡೆ ನಮಗೆ ಸಾವೆ ?
ಎಲ್ಲರೂ ನಲಿವ ಕಡೆ ನಮಗೆ ನೋವೆ ?
ಏನು ಕವಿಯಿತೊ ಮಂಕು, ಮಕ್ಕಳಿಗೆ ! ಯಾರೆರಚಿದರೂ ಬೂದಿ, ಕಾಣೆ,
ನನ್ನ ನೊಲ್ಲರು ನನ್ನ ಮಕ್ಕಳೇ ! ತಾವ್ ಬಾಳಿ, ತಾಯ ಬಾಳಿಸರು.
ಹೆರರ ನುಡಿ, ಹೆರರ ನಡೆ-ಹರರ ಕೂಗೇ ಕೂಗು ; ಹೆರರದೇ ಹೆಮ್ಮೆ !
ನನ್ನ ಮನೆ ಹಾಳು !
ನನ್ನ ನುಡಿ ಬೀಳು !
ನನ್ನ ನಾಡಿನಲಿರುಳು : ನನ್ನ ತೋಟವನಗೆವ, ತೆಂಗಡಕೆಯಿಡುವ,
ತಾವರೆಯ ಕಾಪಿಡುವ, ಮೊಲ್ಲೆ ಮಲ್ಲಿಗೆ ನೆಡುವ, ಆನಂದ ಕೊಡುವ
ಮಕ್ಕಳೆಲ್ಲಿಹರೆನಗೆ-ಹೆರರೊತ್ತೆ ಗಡಿಬಿಡುತ ಹದುಗುತ್ತ, ನುಗ್ಗೆ ಕುಗ್ಗುತ್ತ.
ಹೆರರ ಕೈ ಕಾಯುತ್ತ, ಸಾಯದೆಯೆ ಬದುಕದೆಯೆ ಬಾಳ ನೂಕುವೆನು.'
೫
ಅರಿದೆನರಿದೆನು ಮಾತನಾಡುವಳದಾರೆಂದು : ಕನ್ನಡದ ತಾಯಿ !
ನಮ್ಮ ಕನ್ನಡ ತಾಯಿ, ತನ್ನ ಹೊಂಬಸಿರಿಂದ ನಮ್ಮನ್ನು ತಂದು,
ನಾವು ಬಿಟ್ಟೋಡೆ ಬಿಡದೆ, ಹಂಬಲಿಸಿ, ಮರುಹುಟ್ಟಿ ಹಾರೈಸುತಿಹಳು-
ನಾನೆಂದೆ, ಅಳಲನಾರಿಸಬಯಸಿ- ಏಕಮ್ಮ, ಇನಿಸೊಂದು ಕೊರಗು ?
ಬೇಡಮ್ಮ ಮಕ್ಕಳಲಿ ಇನಿಸೊಂದು ಕಡುಮುನಿಸು-ಬಾರಮ್ಮ, ಹರಸು.
ನಿನ್ನ ನಾಡಿನೊಳದೆಕೊ ಬೆಳಕು ಮೂಡಿಹುದು-ಜೀವ ಕೂಡಿಹುದು.
ನಿನ್ನ ಮಕ್ಕಳು ನಿದ್ದೆಗಳೆದೆದ್ದ ಸಿಂಹದಂತೇಳುತ್ತ, ಮೊಳಗಿ,
ಕಣಕಿಳಿದು ಪಂಪ ನೃಪತುಂಗರಾ ಮಾತುಗಳು ದಿಟವೆನಿಸುತಿಹರು.
ಸೆರೆಯನೊಕ್ಕಡೆಗೊಗೆದು, ಬಿಡುಗಡೆಯ ಕೈಕೊಂಡು, ಹಳ ನೆನಪು ನೆನೆದು,
ಹೊಸ ಕಾಣ್ಕೆಗಳ ಕಂಡು, ಸಾಮ್ರಾಜ್ಯಗಳ ಮತ್ತೆ ಕಟ್ಟುತಿಹರು.
ನಿನ್ನ ನಾಡೊಂದಾಗಿ, ನಿನ್ನ ಸುಡಿ ಮೇಲಾಗಿ, ಮನೆ ಮಕ್ಕಳೆಲ್ಲ
ಪೇರೊಕ್ಕಲಾಗಿ ಪಾಡುವರು !
ತಾಯ್ ಬದುಕಿ, ತಾವ್ ಬದುಕಿ, ಹೆರರ ಬದುಕಿಪರು !
ಹಾಳು ಹಂಪೆಯ ನಡುವೆ, ನಡುಕಟ್ಟಿ ಮತ್ತೊಮ್ಮೆ ಮುಡಿಪಾಗಿ ತಾಯ್ಗೆ
ಭಕ್ತಿಯಲಿ ಜೀವವನು ಸಲಿಸುವರು-ಏಳು !
ಸಡಗರದ ಆ ಕೂಗ ಕೇಳು :
ನಾಡು ಸಿಂಗರವಾಯ್ತು, ಬೀಡು ಹೆಬ್ಬೆಳಕಾಯ್ತು, ಅದೊ ಹಬ್ಬ ಮೆರೆತ !
ಹೆಣ್ಣ ಚೆಲುವನು ನೋಡು-ಗಂಡುಗಲಿಗಳ ನೋಡು-ಕಟ್ಟಾಳುಗಳನು,
ರಾಜರನು, ಋಷಿಗಳನು, ಕವಿಗಳನು, ಧೀರರನು, ಕರ್ಮ ವೀರರನು-
ಹೊಸತ ಹಳದನು ಮಾಡಿ, ಹಳದ ಹೊಸತನು ಮಾಡಿ, ನಾಡೊಂದು ಮೂಡಿ,
ಧರ್ಮ ಸತ್ಯಗಳಿಂದ, ಪ್ರೇಮ ಶಾಂತಿಗಳಿಂದ, ಸ್ವಾತಂತ್ರದಿಂದ,
ಸುಖದಿಂದ, ಸೌಂದರ್ಯದಾನಂದದಿಂದೆಲ್ಲ ಸಮದೃಷ್ಟಿಯಿಂದ
ಬಾಳರೇ ನೀ ಬಂದು ನಲಿಸಿದೊಡೆ, ಹರಸಿದೊಡೆ-ಬಾ ತಾಯಿ, ಹರಸು.
ತೇರೇರು ಬಾ ತಾಯಿ, ನಿನ್ನ ಸಿಂಹಾಸನವನೇರು ಮತ್ತೊಮ್ಮೆ.
ಪಳಮೆಯಲಿ ಪೇರಾಲವನು ನೀನು.ಬಿತ್ಯಲದು ಮೊಳೆತು, ಮರವಾಗಿ,
ಪಡುವ ಮೂಡಲು ತೆಂಕ ಬಡಗಲೆಡೆ ಕೊಂಬೆಗಳನೆಸೆದೆಸೆದು ಬೀಗಿ,
ಈ ಕೊಂಬೆ ಕರಗಿದೊಡೆ ಆ ಕೊಂಬೆ ಬಿಳಿಲಿಳಿದು ಬೇರೂರಿ ತಾಗಿ
ಒಂದೆ ಮರವಮರವಾಗಿರ್ಪಂತೆ, ಅಮರವಾಗಿನ್ನುಮದೆ ಇಹುದು
ನಿನ್ನೊಂದು ಕರ್ನಾಟರತ್ನ ಸಿಂಹಾಸನಂ-ಬಾಳ್ಗೆ, ಅದು ಬೆಳೆಗೆ
ಕನ್ನಡದ ಮುಡಿಯಾಗಿ, ಕನ್ನಡದ ನುಡಿಯಾಗಿ, ಕನ್ನಡದ ಬಾಳ ಕುಡಿಯಾಗಿ !
-ಬಾರಮ್ಮ, ಹರಸು.”
೬
ನಕ್ಕಳಾ ತಾಯಿ,
ಮುದುಕಿ ಎಳೆಯವಳಾಗಿ, ಮಾಸು ಮಿಂಚೆಳೆಯಾಗಿ, ಸವೆದ ಮೈ ತುಂಬಿ,
ಕಡಲ ತೆರೆಗಳನುಟ್ಟು, ಬೆಟ್ಟ ಬಯಲನು ತೊಟ್ಟು, ಅರಿಲ ಮುಡಿಗಿಟ್ಟು,
ಮುಗುಳ್ನಗೆಯ ನಸುನಕ್ಕಳಾ ತಾಯಿ, ನನ್ನ ತಲೆಯಲಿ ಕಯ್ಯ ತಾವರೆಯನಿಟ್ಟು ;
ಸುತ್ತಲುಂ ಕಾಣಿಸಿದರೊಡನೆ-
ಕನ್ನಡದ ಪೊನ್ನಾಡ ಪೆರ್ಮ ನಡಿಗಳ್ !
ಸಾವನೊದೆವಾ ಪಾಲ ಸೂಸು ಕಿಡಿಗಳ್ !
ಹಿಂದೆ ನೀಡಿದ ಸಾಲು, ಮುಂದೆ ನೀಡಿದ ಸಾಲು, ಕನ್ನಡದ ಕರುಳುಗಳು
-ನಡುವೆ, ಸಿರಿ ತಾಯಿ,
ಭುವನೇಶ್ವರೀದೇವಿ ರಥವನೇರಿದಳು.
ಕೂಗಿದರು ಎಲ್ಲರೂ ಒಕ್ಕೊರಲ್ !
“ತಾಯ್ ಬಿಜಯಮಾಡುವಳು, ದಾರಿ ಬಿಡಿ, ದಾರಿ ಬಿಡಿ, ಅಡ್ಡ ಬಾರದಿರಿ,
ಭಾರತಾಂಬೆಯ ಹಿರಿಯ ಹೆಣ್‌ಮಗಳೆ, ದಾರಿ ತೋರುವ ಹಿರಿಯ ಸೊಡರೆ,
ಬಾಳಮ್ಮ, ಬಾಳು !
ನೀನ್ ಬಾಳೆ, ಏನ್ ಬಾಳು ನಿನ್ನ ಮಕ್ಕಳದು !-ಬಾನ್ ಬಾಳು, ತಾಯೆ-
ಬಾಳಮ್ಮ, ಬಾಳು !”
೭
ಚೆಲುವೆಯರ, ಚೆನ್ನಿಗರ, ಹಿರಿಯ ತಾಯ್ ಮಕ್ಕಳಿರ, ಒಡಹುಟ್ಟಿದವರಾ
ಒಸಗೆನುಡಿ ಕೇಳಿದಿರ, ತಾಳಿದಿರ ಎದೆಯಲ್ಲಿ, ತಾಳಿ ಬಾಳುವಿರಾ,
ನಾಡು ನುಡಿ ನಡೆಗಳನ್ನು ಮುನ್ನಡೆಗೆ ನಡಸು, ಮುಂದೆ ಸಾಗುವಿರಾ ?
ಭಾರತದ, ಲೋಕದಾ ಮಕ್ಕಳು ಹಿರಿದಾಗಿ ತೂಕ ತೂಗುವಿರಾ ?
ಬನ್ನಿ, ಓ ಮಕ್ಕಳಿರ,
ಒಕ್ಕೊರಲಲೆಲ್ಲರೂ ಕೂಗಿ ಈ ಒಕ್ಕೂಗ-ಈ ಹಿರಿಯ ಕೂಗ -
“ ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಗೆಲ್ಗೆ, ಬಾಳ್ಗೆ-
ಕನ್ನಡದ ತಾಯ್ ಗೆಲ್ಗೆ, ಬಾಳ್ಗೆ.”
=========================================
ಕನ್ನಡದ ಬೕವುಟ
ಎೕರಿಸಿ, ಹೕರಿಸಿ, ಕನ್ನಡದ ಬೕವಟ !
ಒೕ ಹೊ ಕನ್ನಡನೕಡು, ಅೕಹ ಕನ್‌ನಡನುಡಿ !
ಹೕರಿಸಿ, ತೋರಿಸಿ, ಕೆಚ್‌ಚೆದೆಯ ಬೕವಟ !
ಗೕಳಿಯಲಿ ಫಟಪಟ, ದೕಳಿಯಲಿ ಚಟಚಟ,
|
ಉರಿಯಿತೋ ಉರಿಯಿತು ಹಗೆಯ ಹಟ ಮನೆ ಮಟ,
ಹೕಳ್ ಹೕಳ್ ಸುರಿಯಿತು ಹಗೆಯ ಬೀಡಕ್‌ಕಟ !
ಬೕಳ್ ಕನ್ನಡ ತಮ್ |
ಎೕಳ್ ಕನ್ನಡ ತೕಯ್ !
ಅೕಳ್ ಕನ್ನಡ ತೕಯ್ !
ಕನ್‌ನಡಿಗರೊಡತಿ ಒ ರೕಜೇಶ್‌ವರೀ !
ಮೌರ್‌ಯ ಕಳಚುರ್‌ಯರು, ಗಂಗರು, ಕದಂಬರು,
ರಟ್‌ಟರು, ಚಳುಕ್‌ಯರು, ಹೊಯ್‌ಸಳರು, ಯೕದವರು,
ಇಳೆಗೆ ಮೇಲೕದವರು, ಬೕಣರು, ಜೕಣರು,
ಕೊಲೆಯ ಕೕಳ್‌ಕಿಚ್‌ಚಿಂಗೆ ತಂಪುಮಳೆ ತಳಿದು,
ಚೆಲುವು ನೆಲ ಸೇಲುತ್‌ತು, ಕಲೆಯ ಹೊಂಬೆಳೆಯಿಟ್‌ಟು,
ನಗಿಸಿದರು ನೕಡನ್ನು ಕಡಿದು ಕಗ್‌ಗೕಡನು :
ಮೕನವನ ದೇವತೆಗೆ ತಂದ ಜಿನಭಕ್‌ತರು,
ಹಂಪೆಯ ವಿರುೕಪೕಕ್‌ಷ ಪುತ್‌ರರು, ವಿರಕ್‌ತರು,
ವೀರನೕರೕಯಣನ ಕೃಪೆಯೊಳೕಸಕ್‌ತರು,
ಶ್ರೀ ಗೌರಿ ಕೕವಲಿಹ ರೕಯರನುರಕ್‌ತರು,
ನಮ್‌ಮ ತೕಯ್ ಮಕ್‌ಕಳು-
ಬೕಳ ಬೆಳದಿಂಗಳಲಿ ಒಲಿದು ನಲಿದವರು-
ಬೇವೊ ಬೆಲ್‌ಲವೊ ಬರಲಿ, ಮಲ್‌ಲಿಗೆಯೊ ಮುಳ್‌ಳೊ,
ಬೕನ ಬೆಳಕಿನಲಿ, ಮೕನದಳುಕಿನಲಿ,
ಚೆನ್‌ನು ಬದುಕನ್ನು ಕುಣಿಸಿ ಒಲಿದು ನಲಿದವರು-
ನಮ್‌ಮ ತೕಯಣುಗರು,
ಪಂಪ, ರನ್‌ನನೋ, ಬಸವನೋ, ಮೕಧವನೊ,
ಅೕ ಅಕ್‌ಕಮಹದೇವಿ, ನೇರಣಪ, ಚಿಕದೇವ,
ಜಕ್‌ಕಣ, ಹೊನ್‌ನಮ್‌ಮ, ನಮ್‌ಮಮ್‌ಮನೆಳೆಯರು,
ಚೆಲುವ ಚೆಲುವೆಯರು-ಚಿನ್‌ನದ ಚಿಣ್‌ಣರು,
ಕಲಿಗಳು, ಕಿಡಿಗಳು, ಗಂಡರು, ಮೊಂಡರು,
ನಲಿದೊಲಿದು ಬೆಚ್‌ಚೆಂದು ನೆಚ್ ಚಿಂಗೆ ಮೆಚ್‌ಚಿಂಗೆ
ಕಿಚ್‌ಚಿನಲಿ ಹೇಯ್‌ದು ನಲ್‌ಲನ ಹಿಡಿದ ಹೆಂಡಿರು,
ಸತಿಗಳು, ಯತಿಗಳು, ವ್‌ರತಿಗಳು, ಕೃತಿಗಳು-
ಕನ್‌ನಡದ ಬೕವುಟವ ಹಿಡಿಯದವರೕರು ?
ಕನ್‌ನಡದ ಬೕವುಟಕೆ ಮಡಿಯದವರೕರು ?
ನಮ್‌ಮ ಇೕ ಬೕವುಟಕೆ ಮಿಡಿಯದವರೕರು ?
ಹೇಳಿರೋ ಹೆಸರೊಂದು ನೆನಹಿನಲಿ ಸುಳಿದರೆ !
ಹುಡುಕಿರೋ ಹೇಡಿ ತೕನೊಬ್‌ಬ ಮನಗುಳಿದರೆ !
ಕನ್‌ನಡದ ನೕಡಲೕ,
ಕನ್‌ನಡದ ನುಡಿಯಲೕ,
ಕನ್‌ನಡಿಗನೆದೆ ಕಡೆದ ತೆನೆಯಲೕ ಕೆನೆಯಲೕ !
ಬೆಳಕು ಹರಿಯಿತು ಎೕಳಿ,
ಇರುಳು ಸವೆಯಿತು ಎೕಳಿ,
ತೕಯ ಕರೆ ಕೇಳಿ,
ಎಳಿರೋ, ಎಳಿರೋ, ಬೕಳ ಬಲಿ ಬೇಳಿರೋ
ಎಲ್‌ಲೋಲುಮೆಯುೕ ಕುೕಡಿದೊಂದೊಲುಮೆ ತೕಳಿರೋ,
“ ತೕಯುಳಿಯೆ ನೕನುಳಿದೆ,
ತೕಯಳಿಯೆ ನೕನಳಿದೆ.
ಮನೆ ಕೕಯಿ, ತುರು ಕೕಯಿ, ನೕಡ ಗಡಿ ಗುಡಿ ಕೕಯಿ,
ಕೕಯಲೕರೆಯ, ಸೕಯಿ,''
ಎಂದೆಲ್‌ಲ ಎೕಳಿರೋ-
ಅೕಹ ಕನ್‌ನಡನುಡಿ, ಅೕಹ ಕನ್‌ನಡನೕಡು,
ಹಿರಿಯ ಕನ್‌ನಡ ಪಡೆ, ಮರಿಯ ಕನ್‌ನಡ ಪಡೆ
ಎೕಳಿರೋ, ಬೕಳಿರೋ,
ಕನ್‌ನಡದ ಬೕವುಟವ ಹಿಡಿಯಿರೋ, ನಡೆಯಿರೋ ?
ಎೕಳ್ ಕನ್ನಡ ತೕಯ್,
ಬೕಳ್ ಕನ್‌ನಡ ತೕಯ್,
ಅೕಳ್ ಕನ್ನಡ ತೕಯ್,
ಕನ್‌ಡಿಗರೊಡತಿ, ಒೕ ರೕಜೇಶ್ವರೀ !
ಇಂದಿನದೆ ಹೇಳಿರೋ ಈ ನಮ್‌ಮ ಬೕವಟ !
ಕುಂದಿಹುದೆ ನೋಡಿರೋ ಇೕ ನಮ್‌ಮ ಬೕವಟ !
ಕಂದದಿದೆ ಇಂದಿಗುೕ ಕನ್‌ನಡದ ಬೕವುಟ !
ಎೕನೇನ ಕಂಡದೋ ಬೕನೕಡಿ ಬೕವಟ !
ಅೕವುದನು ಕೕಣದೋ ಜೀವಕಳೆ ಬೕವಟ !
ಕನ್‌ನಡದ ಬೕವುಟಗಳೊಂದೕದ ಬೕವುಟ !
ಎೕರಿಸಿ, ಹೕರಿಸಿ, ತೋರಿಸಿ ಬೕವುಟ !
ತೇಲೕಡು, ಮೋಲೕಡು ಒೕಲೕಡು ಬೕವುಟ !
ಚೆಲುವೕಗು, ಗೆಲುವೕಗು, ಬಲವೕಗು, ಬೕವಟ !
ಹೊನ್‌ನೕಗಿ, ಹೆಣ್‌ಣೕಗಿ, ಹಸನೕದ ಮಣ್‌ಣೕಗಿ,
ಹೊಸಹೊಸತು ಕಣ್‌ಣೕಗಿ, ಬೆಳಕೕಗಿ, ಬೆಳೆಯೕಗಿ,
ಕುೕಡುತಿಹ ಕನ್‌ನಡದ ಹೊಮ್‌ಮುಗೆಯ ಕೕವೕಗಿ,
ಪರಿಪರಿಯ ಹೋಂಬಗೆಯ ಹೆರಿಗೆಯ ನೋವೕಗಿ,
ಸಿರಿಯ ಜಯಚೕಮನೇ* ಹಿರಿಯೊಲುಮೆ ಹುೕವೕಗಿ (* ಮೊದಲು-ನಲುಮಡಿ ಕೃಷ್‌ಣನೕ)
ಒೕಳು ಎಲೆ ಬೕವಟ !
ಬೕಳ್ ಕನ್‌ನಡ ತೕಯ್,
ಎೕಳ್ ಕನ್ನಡ ತೕಯ್,
ಅೕಳ್ ಕನ್‌ನಡ ಯೕಯ್,
ಕನ್‌ನಡಿಗರೊಡತಿ ಒೕ ರೕಜೇಶ್‌ವರೀ |
೧೯೩೮]
=======================
ಬಾನ್ ಕೊಂಡ ಕೃಷ್ಣನ್
೧
ಇನ್ನೊಮ್ಮೆ ಪಾಡುವೆನ್ ನನ್ನ ದೊರೆ ಕೃಷ್ಣನನ್ -
ಇನ್ನೊಮ್ಮೆ ಪಾಡುವೆನ್ ರಾಜರ್ಷಿ ಕೃಷ್ಣನನ್.
ನನ್ನ ದೊರೆಗೆನ್ನ ಪೊರೆದಾಳಂಗೆ,
ನನ್ನೊಲವಿನಾಣ್ಮಂಗೆ,
ನನ್ನುಸಿರ ಭಕ್ತಿಯೊಡೆಯಂಗೆ,
ಭಕ್ತ ಕನಕಂಗೆ,
ಕಲಿಕಾಲ ಜನಕಂಗೆ,
ಕರ್ನಾಟಕ ಪ್ರೇಮಸಾಮ್ರಾಜ್ಯ ಪೂಜ್ಯಂಗೆ,
ಆದರ್ಶ ಪುರುಷಂಗೆ,
ಆದ ಕೃಷ್ಣಂಗೆ,
ಹಂಬಲಿಸಿ ನೆನೆದು ನೆನೆದು, ಕಂಬನಿಯ ಕರೆದು ಕರೆದು,
ಅಳುವರೊಡನತ್ತತ್ತು ಪಾಡದೆಂತಿರ್ಪೆನ್ ?
ಇನ್ನೊಮ್ಮೆ ಪಾಡುವಂ, ಬಾ ವಾಣಿ, ನಮ್ಮ ದೊರೆ ದೇವರೆರೆ ಕೃಷ್ಣನನ್
ನಾಲುಮಡಿ ಕೃಷ್ಣನನ್.
ಪಿಂತೊಮ್ಮೆ ನಾವಿರ್ವರುಂ ಪಾಡಿದಂತಲ್ತು,
ಸಂತಸದ ಹೆಬ್ಬೆಳೆಯ ಪೊನ್ನ ಪಾಡಲ್ತು
ಇಂದಿನೀ ಪಾಡು,
ಬೆಂದೆದೆಯ ಪಾಡು.
ಹಂಬಲಿಸಿ ಕೊರಗಿ ಕೊರಗಿ, ಕಂಬನಿಯ ಕರಗಿ ಕರಗಿ,
ಅತ್ಯತ್ತು ಸೊರಗಿ ಸೊರಗಿ,
ಸೆರೆಬಿಗಿದ ಕೊರಳಿಂದ ಪಾಡುವಂ, ಬಾ ವಾಣಿ, ನಮ್ಮಿನಿಯ
ದೊರೆಯನಿತ್ತೊಮ್ಮೆ,
೨
ಆದನೇ ಕೃಷ್ಣನ್ !
ಪೋದನೇ ಕೃಷ್ಣನ್ !
ಆಯ್ಕೆ ಆ ಬಾಳೆ !
ಪೋಯ್ತೆ ಪೊನ್ನಾಳ್ಕೆ !
ಕನ್ನಡದ ಕಣ್ಣಮಣಿ, ಕರ್ನಾಟ ಜೀವಮಣಿ ಬೆಳಗದಿನ್ನೆಮಗೆ,
ಧರ್ಮವಥವನ್ ತೊಳಗಿ ಬೆಳಗದಿನ್ನೆಮಗೆ,
ರಾಜವಥಮನ್ ತೋಳಗಿ ಬೆಳಗದಿನ್ನೆಮಗೆ.
ನಡುವಗಲ ನೇಸರನು ಕರ್ಪು ಹಿಡಿದಿಡಿದಂತೆ,
ನೆರೆಯ ಬೆಳ್ದಿಂಗಳನು ಪಾವು ಗಿಡಿದಂತೆ,
ತಿಳಿಯಾದ ಬಾನಿಂದ ಬರಸಿಡಿಲ್ ಸಿಡಿದಂತೆ,
ಬೆನ್ನಿರಿವ ಕಳ್ಳಕೊಲೆ ಸುರಗಿಯಂತೆ,
ಎತ್ತಣಿಂದೆರಗಿತೋ ಮೃತ್ಯು !
ಓ ಹಾಳು ಮೃತ್ಯೂ,
ಇರಿದೆ ನೀನ್ ಭೂಲೋಕದಾದರ್ಶ ರಾಜನನ್.
ಇರಿದೆ ನೀನ್, ನಿಷ್ಕರುಣಿ, ಕಾವ್ಯರಸ ಭೋಜನನ್,
ಮುರಿದೆ ನೀನ್, ಓ ಪಾಸಿ, ಪೂರ್ಣ ಪುಣ್ಯಾತ್ಮನನ್,
ಮುರಿದೆ ಸಿಂಹಾಸನದ ನಿರ್ಮಲ ಮಹಾತ್ಮನನ್,
ಒಂದಿರಿತಕಿದೆ ನೀನೆಲ್ಲರೆದೆಯನ್,
ಒಂದಾದ ಕರ್ನಾಟದಲ್ಲರೆದೆಯನ್,
ಚೆಂದ ಬಾಳನ್ ಮೆಚ್ಚುವೆಲ್ಲರೆದೆಯನ್ !
ಬೆಳಗಿನಲಿ ತಂಗಾಳಿ ನುಸುನುಸುಳಿ ಬಂದತ್ತು-
ಪೊಲ್ಲನುಡಿಯಲ್ಲಲ್ಲಿ ಸುಳಿಸುಳಿದು ಬಂದಿತ್ತು-
ಬೆಂಗಳೂರರಮನೆಯ ಕಾಂತಿ ಕುಂದಿತ್ತು-
ಮೈಸೂರಿನರಮನೆಯ ಕಳಶ ಕಳಚಿತ್ತು-
ದುಃಖ ಭಾರವ ಹೊತ್ತು,
ರಾಜಬೀದಿಯ ನೆರೆದ ಕಿಕ್ಕಿರಿದ ಕಣ್ಣು ಹಿರಿದತ್ತು,
ಅರಮನೆಯ ಕೊರಳೊಡನೆ ಕೊರಲಾಗಿ ನಾಡು ಬಿಕ್ಕಿತ್ತು,
ನಿಟ್ಟುಸಿರ ಬಿಸಿಯಳಲ ಹುಚ್ಚು ಹೊಳೆಯುಕ್ಕಿತ್ತು-
ಅದ ಕೇಳ್ವರಾರು ?
ಮೆಲ್ಲೆದೆಯ ಕಲ್ಲೆದೆಯಮಾಡಿ ಆದ ತಾಳ್ವರಾರು ?
--ಮುಂದೆ ನಡೆ ಮುಂದೆ ನಡೆ, ಓ ವಾಣಿ-ಹೂವುಗಳ ಚೆಲ್ಲು ;
ಅಳಿ, ಅಮಂಗಳಮೇ-ಮಂಗಳಮೆ, ಗೆಲ್ಲು.
೩
ಮಧುವನದೆ ತಾಯ ಬಳಿ ಚಂದನವನೊಟ್ಟಿ,
ವಿಧಿಕೊಂಡ ರಾಜಂಗೆ ರಾಜವೈಭವ ಕಟ್ಟಿ,
ಉಳಿದೆಮ್ಮ ಪುಣ್ಯಮಾ ಎಳಅರಸು ಮಗನುಂ,
ಕೆಳೆಯನಾ ಮಂತ್ರಿಯುಂ, ಪ್ರಬೆಗಳಾ ಪಿರಿಯರುಂ, ಪರಿವಾರಮುಂ,
ನಸುನಗುತೆ ಮಲಗಿದ್ದ ಸ್ವಾಮಿಯನ್ ಪರಸಿ,
ಕಡೆ ದರ್ಶನಂಗೊಂಡು, ಭಕ್ತಿಯಿನ್ ಕೈ ಮುಗಿದು, -
ದೇವಲೋಕಕ್ಕುಯ್ಕೆ ಕಯ್ಯಡೆಯನಿಟ್ಟರ್,
ಅಗ್ನಿ ದೇವಂಗೆ ಕೊಟ್ಟರ್.
ಆ ದಿವ್ಯ ತೇಜೋಗ್ನಿಯಿಂದಗ್ನಿ ತೇಜಮದು ಕಳೆ ತುಂಬಿ ಬೆಳಗೆ,
ಪೊಗೆಮೊಗೆದು, ನೆಗೆನೆಗೆದು, ಮುಗಿಲ ಕಡೆ ನಡೆಯುತಿರೆ ಅಗ್ನಿ,
ಉರಿ ತಟ್ಟದವರಾರು ?
ತಂದೆ ಕಳೆದೀ ನಮ್ಮ ಬಾಳೇತಕೆಂದು,
ನೋಯದವರಾರಂದು, ಬೇಯದವರಾರ೦ದು, ಸುಯ್ಯದವರಾರು ?
ಕರುಳಿಲ್ಲದಾ ಬಿದಿಯ ಬಯ್ಯದವರಾರು ?
ಸ್ವರ್ಣಯುಗಮಾಯ್ಕೆಂದು ಮರುಗದವರಾರು ?
ಇನಿತಾಯ್ತೆ, ಹಿಡಿಮಣ್ಣು, ಹಿಡಿಬೂದಿ, ಆಳ ಬಾಳು ?
ಬಡವನೋ, ಬಲ್ಲಿದನೊ, ದೊರೆಯೊ, ಹುಳುವೋ,
ಇನಿತೆ ಈ ಬಾಳು ?
-ಮುಂದೆ ನಡೆ, ಮುಂದೆ ನಡೆ, ಓ ವಾಣಿ-ಹೂವುಗಳ ಚೆಲ್ಲು ;
ಅಳಿ, ಅಮಂಗಳಮೇ-ಮಂಗಳಮೆ, ಗೆಲ್ಲು.
೪
ಮಂಗಳಮೆ ಗೆಲ್ಲು !
ಹೂವಾದ ಬಾಳುದಿರೆ, ಹಣ್ಣಾಗಿ ಬಹುದು-ಮತ್ತೆ ಹೂವಹುದು.
ಬೂದಿ ಬೂದಿಗೆ ಕೂಡೆ, ಮಣ್ಣು ಮಣ್ಣಾಗೆ,
ಮೃತನಮೃತನಾಗುವನು,
ದಿವ್ಯ ಕಳೆಯಿನ್ ಕೂಡಿದಾತ್ಮವಾಗುವನು.
ಆತ್ಮವಾತ್ಮಕೆ ಕೂಡಿ ಹಿಗ್ಗುತಿಹುದು.
ವಾಣಿ ಕಣ್ಣನ್ ಕೊಟ್ಟು ತೋರಿದಳ್-ತೋರಿದೊಡೆ ಹಿಗ್ಗಾಗಿ ಕಂಡೆನ್ !
ಬಾನ್ ಕೊಂಡ ಕೃಷ್ಣನ್,
ನೆಲನೆಲ್ಲವನ್ ಗೆಟ್ಟು, ಬಾನುಮನ್ ಕೊಂಡ ಕೃಷ್ಣನ್ !
ವಾಣಿ ಕಣ್ಣನ್ ತೆರೆಯೆ, ಕಂಡೆನ್
ಬಾನೊಂದಾಟಮನ್,
ಪೊಸತು ಸಿರಿಮಾಟಮನ್,
ಕೃಷ್ಣಂಗೆ ಪಾಡುವಾ ಶಾಶ್ವತದ ಪಾಟಮನ್.
ಪೊನ್ನ ಪಲ್ಲಕ್ಕಿಯನ್ ಭಕ್ತಿಯಿನ್ ಪೊತ್ತು,
ಕಲ್ಪವೃಕ್ಷದ ಪೂವನೆರಚುತ್ತ ಸುತ್ತು, ಆನಂದ ನೃತ್ಯಮನ್ ಕುಣಿದು ನಡೆದತ್ತು
ದೇವಗಣ ಮುಕ್ತಗಣದೆಡೆಗೆ.
ಲೋಕದಿನ್ ಲೋಕದೆಡೆಗೆ
ಋಷಿಲೋಕ, ದೇವಲೋಕ,
ರವಿಲೋಕ, ಚಂದ್ರಲೋಕ,
ವೀರರಾ ಭೋಗದಾ ಸ್ವರ್ಗಲೋಕ,
ತಪಸಿನಾ, ಸತ್ಯದಾ ಧರ್ಮದಾ, ಬ್ರಹ್ಮದಾ ಲೋಕ,
ಶಿವಲೋಕ, ವಿಷ್ಣುಲೋಕ-
ಆ ಪರಮಪದವಾದ ಮೋಕ್ಷ ಲೋಕ-
ಲೋಕದಿನ್ ಲೋಕದೆಡೆಗೆ,
ದೇವಗಣ ಪೊತ್ತ ನಡೆಗೆ !
ಆನಂದ, ಆನಂದ, ನಿತ್ಯ ಶುಭಮಂಗಳಂ !
ಅಳಲದಿರಿ, ತೊಳಲದಿರಿ, ಆನಂದ, ಮಂಗಳಂ !
ಶ್ರೀ ಕೃಷ್ಣದೇವನಿಗೆ ನಿತ್ಯ ಶುಭಮಂಗಳಂ.
೫
ಅಳಲೋಳಾನಂದಂ !
ಕೃಷ್ಣನಮನೆಯ್ದೆ, ನಿಸ್ತೇಜವಾಗಿರ್ದ ದೈವಂಗಳೆಲ್ಲಂ
ಅಳಿವುಳಿವು ನೆಲೆಯರಿತು ತೀವಿದುವು ಚೆಂದಂ.
ಕೃಷ್ಣನಾರಾಧನೆಯ ಶಕ್ತಿಗಳನ್ನೆಲ್ಲಂ
ಕಳೆದು ತಲ್ಲಣವೆಲ್ಲ ಮೂಡುತಿರೆ ನೆನಹಿನಲಿ ಗೆಲ್ಲಂ
ಕೃಷ್ಣ ಯೋಗೀಶ್ವರನ ಭಾವನೆಯ ಸಿದ್ದಿಯೊಂದಂದಂ
ಮೊಳೆವಂತೆ ಮಸಗಿದುವು ಚೈತನ್ಯ ದೆಸಕಂಗಳಿಂದಂ,
ಕೃಷ್ಣನೆಣಿಸಿರ್ದೆಣಿಕೆಯೊಂದೊಂದೆ ? ಗೆಯ್ಮೆಯೊಳ್ ಬಿತ್ತಿರ್ದುದೊಂದೆ ?
ಹೊಳೆವ ಕನಸೇನೊಂದೆ ? ಹೂಡಿದ್ದ ಬಯಕೆಯೊಂದೊಂದೆ ?
ಕೃಷ್ಣನೊಲಿದಾಳ್ಗೊಂಡ ಇಹಪರದ ಧೈಯಂಗಳೆಲ್ಲಂ
ಬೆಳೆಯುತಿವೆ ಬೆಳಸುತಿರುವಭಿಮಾನಿ ದೇವತೆಗಳಿಂದಂ,
ಕೃಷ್ಣನಾಡಿದ ನುಡಿಯದೊಂದುಂ
ಅಳಿವ ನುಡಿಯಲ್ಲಂ-
ಮೈಸೂರ ಮೈಸಿರಿಯ ಬಳವಿ,
ಕರ್ನಾಟದೋರ್ನೋಟದಳವಿ
ಭಾರತದೊಳೊಕ್ಕೂಟದಾಳ್ಕೆ,
ಬಿಡುತೆಯೊಳಗೆಲ್ಲರಿಗೆ ಬಾಳ್ಕೆ,
ಬಡವರ ಸಿರಿ ಬರುವ ಸೊಂಪು,
ಕುಡಿವರಿದು ಕಲೆ ತರುವ ತಂಪು,
ಯುದ್ಧದಲಿ ದುರುಳರನು ಮುರಿದೆಸೆವ ಗೆಲವು,
ಶಾಂತಿಯಲಿ ಕಲ್ಯಾಣ ಗುಣದೊದವು ನಲವು,
ಕೃಷ್ಣ ತೋರಿದ ಬೆಳಕು ಹೆಚ್ಚು ನಿಂದು
ಬೆಳಗುತಿಹುದೆಂದೂ.
ಅಳಿದನೇ ಶ್ರೀಕೃಷ್ಣನಳಿಯನ್ !
ಇರ್ಪನೇ ಶ್ರೀಕೃಷ್ಣನಿರ್ಪನ್-ಧೀರಧರ್ಮಾತ್ಮರಲ್ಲಿರ್ಪನ್ !
ಅಲ್ಲಿರ್ಪನಿಲ್ಲಿರ್ಪನೆಲ್ಲೆಲ್ಲುಮಿರ್ಪನ್ !
ಬಸವಳಿದ ಭಾಗ್ಯದೇವತೆಗಳರಿತಿದನು,
ಪೊಸೆಯಿಸುವರಾನಂದ ವೃತ್ತದೊಳಗಿದನು,
ಪಾಡುತ್ತ ಸ್ವರ್ಗದೊಳಗಿದನು.
೬
ಆನಂದದಲಿ ಕೇಳಿ ಸ್ವರ್ಗದೊಳಗಿದನು
ಬಾನಂದವನು ಸವಿದ ಸುಖದ ಯದು ಭೂಪರ್,
ಪುಟ್ಟು ಪೊಂದುಗಳೊಳಗನರಿತಮೃತರೂಪರ್,
ಕಲೆತೆಲ್ಲ ಒಂದರ್,
ನಲಿಯುತಳ್ತೆಂದರ್
ಶ್ರೀ ಕೃಷ್ಣನನ್ ಕಾಣಲೊಗ್ಗಿನಲಿ ನಿಂದರ್.
ಆನಂದದಿನ್ ತಬ್ಬಿ, ಆನಂದ ಬಾಷ್ಪಮನ್ ಸುರಿದು,
ಆನಂದದೊಂದಿಗೆ ಸಲ್ಲಿಸಿದರುಲಿದು-
ಯದುರಾಯ, ರಾಜೊಡೆಯ, ಚಿಕದೇವ, ಮುಮ್ಮಡಿ ಕೃಷ್ಣನ್,
ಹೊಸತೊಡಲು ಮಿಸುಗುತಿಹ ಚಾಮರಾಜೊಡೆಯನ್,
ಹೊಸ ನೆನಯು ಹೊಮ್ಮುತಿಹ ಕೆಂಪನಂಜಾಂಬೆ,
ಹೊಸಹೊಸತು ಸಗ್ಗಗಳ ಸುಳಿಯುತಿಹ ನರಸಿಂಹರಾಜನ್,
ಹಿಂದೆ ಜಾನ್‌ಕೊಂಡವರ್ ಪಿರಿ.ಯರೆಲ್ಲರ್,
ತಂದೆ ತಾಯ್ ತಂಗಿ ತಮ್ಮಂದಿರೆಲ್ಲರ್.
ಒಂದಾಗಿ ಇದಿರ್ಗೊಂಡು ನುಡಿದರವರುಲಿದು-
“ ಬಾ, ಕೃಷ್ಣ, ನಲ್ ಬರವು, ನಮ್ಮೊಳಗೆ ಸೇರು.
ದೇವರಲಿ ದೇವನೆನೆ ಗದ್ದುಗೆಯನೇರು.
ಭೂಮಿ ಭಾರದ ಹೊರೆಯನಿಳುಹು, ತಂಪಾಗು.
ದೇವರೂಳಿಗದೆಡೆಗೆ ದೂತನೆನೆ ಸಾಗು.
ಭೋಗ ಪೀಠದಲಿದ್ದು ಋಷಿಯಂತೆ ನಡೆದೆ.
ರಾಜರಲಿ ರಾಜನೆನೆ ಚಕ್ರವರ್ತಿಯ ಮೆಚ್ಚ ಮನ್ನಣೆಯ ಪಡೆದೆ.
ಲೋಕವೇ ಕೊಂಡಾಡೆ ನಲ್ಲಬಾಳ್ ಬಾಳ್ದೆ.
ನಮ್ಮ ಹೆಮ್ಮೆಯ ಮನೆಗೆ ಹಿರಿಯ ಹೆಸರಾಳ್ದೆ.
ಬಾ ಕೃಷ್ಣ, ನೀ ಧನ್ಯ, ನಿನ್ನಾಳ್ಕೆ ಧನ್ಯ,
ನಾಡಿಂಗೆ ನೀ ನೆಟ್ಟ ನಮ್ಮ ಜಯ ಧನ್ಯ,
ಶ್ರೀ ಜಯನನಲ್ಲಿಟ್ಟ ನೀನೆ ಧನ್ಯ.
ಅವನ ದಾರಿಯ ನಾವು ಶುಭದ ತಾರೆಗಳಾಗಿ ಬೆಳಗಿ.
ಹಿರಿಯರಲ್ಲಿ ಹಿರಿಯನೆನೆ ಬೆಳಗಿಸುವ ತೊಳಗಿ.
ಬಾ ಕೃಷ್ಣ, ನಲ್ ಬರವು, ನಮ್ಮ ನನ್ನೊಲವು,
ನಮ್ಮ ಜಯನೊಲವು !
೭
ಜಯಮಕ್ಕೆ ಶ್ರೀ ಜಯಂಗೆ!
ಶುಭಮಕ್ಕೆ ಶ್ರೀ ಜಯಂಗೆ !
ಜಯಚಾಮರಾಜೇಂದ್ರ ಚಂದ್ರಂಗೆ ವಿಭವಮಕ್ಕೆ !
ಯದುಕುಲವ ಕಾಯುವಾ ಶಕ್ತಿಗಳ ದಿವ್ಯ ಪ್ರಸಾದಮಕ್ಕೆ !
ಮೈಸೂರ ಮೈಸಿರಿಗೆ ಕಳೆ ಪೆರ್ಚುತಿರ್ಕೆ !
ಕನ್ನಡಮ್ಮನ ಹೃದಯ ಕಾನಂದಮಿರ್ಕೆ !
ಶ್ರೀಕೃಷ್ಣದೇವನೆಮ್ಮನ್ ಪರಸುತಿರ್ಕೆ !
ಕನ್ನಡದ ಕುಲಕರ್ಕ ನಿತ್ಯ ಶುಭಮಂಗಳಂ,
ಜಾರದೆಯೆ ಜಯಮಂಗಳಂ !
ಭೂರಿಯಲಿ ಜಯಮಂಗಳಂ !
೧೯೪೦.
==================================
ಶ್ರೀ ಜಯನ ಬೆಳಕು
ಕನ್ನಡದ ಬಾನಿನಲಿ ಮೂಡಿತದೊ ಬೆಳಕು,
ಪುಣ್ಯ ಕಣ್ಣೆರೆದಂತೆ ಬೆಳಕು !
ಕನ್ನಡಿಗರೊಲುಮೆ ತೆರೆಹೊಮ್ಮಿ ಸುವ ಬೆಳಕು,
ಹೊನ್ನ ಕನಸನು ತರುವ ಹೊಸ ಕಳೆಯ ಬೆಳಕು,
ಮುನ್ನ ರಿಯದಚ್ಚರಿಯ ಮೆಚ್ಚು ಬೆಳಕು.
ಬೆಳ್ಳಿ ಬೆಳಗುವ ಬಾನ ಬೆಳ್ಳನೆಯ ಬೆಳಕು,
ಒಳ್ಳಿತೊಸರುವ ಹೆಸರ ದೊಡ್ಡ ಬೆಳಕು.
ಸೂರ್ಯ ಚಂದ್ರರು ಮುಳುಗಿ, ಸುತ್ತೆ, ಕಗ್ಗತ್ತಲೆಯ ಮೋಡ ಹೇರಿ.
ತೆರೆ ನರಳ್ವ ನಡುಗಡಲ ಹಡಗಿನೆಡೆ, ಮೂಡಗೆಂಪೇರಿ,
ಮತ್ತೊಮ್ಮೆ ಮೇಲ್ ನೆಗೆವ ದೇವರುರಿಗಣ್ಣಂತೆ ತೋರಿ,
ನೆಗೆಯುತ್ತಿದೆ ಮತ್ತೊಮ್ಮೆ ನಮಗದೋ ತುಂಬು ಬಾಳ್ ಬೀರಿ
ಹಿರಿಯ ಬೆಳಕೊಂದು ಸಿರಿ ಸಾರಿ.
ಆಡಿ, ಕುಣಿದಾಡಿ, ಜಲವೆಲ್ಲಾ !
ಪಾಡಿ, ಓ ಪಾಡಿ, ನೆಲವೆಲ್ಲಾ !
ಕೂಗಿ, ನಾಡೆಲ್ಲಾ, ಬೀಗಿ, ಬೀಡೆಲ್ಲಾ,
ಓಲಾಡಿ, ಊರೆಲ್ಲ, ಮೇಲಾಡಿ ಹಳ್ಳಿಗಾಡೆಲ್ಲಾ,
ಸೋಲು ನಮಗಿನ್ನಿಲ್ಲ, ಗೆಲವೆ ಇನ್ನೆಲ್ಲಾ !
ಭಯ ಚೆದರೆ, ಚಿಮ್ಮುತಿದೆ ಕಳಕಳಿಯ ಬೆಳಕು,
ದಯದ ತಣ್ಬೆಳಕು,
ಜಯದ ಕಣ್ಬೆಳಕು,
ನಯದ ನುಣ್ಬೆಳಕು !
ಬೆರಗೆನಿಸಿ, ಮುದ್ದೆನಿಸಿ, ಗೆಲುವೆನಿಸಿ, ಚೆಲುವೆನಿಸಿ,
ಅರಿವಾಗಿ, ಅರುಳಾಗಿ, ಅರಸಿಯ ತಿರುಳಾಗಿ,
ಬೆಳ್ಗೊಡೆಯ ನೆರಳಾಗಿ, ಭಕ್ತಿಯರಳಾಗಿ,
ತಂದೆ ತಾಯ್ದೆಂದಿಲ್ಲದೊಲವ ಮಣಿಸಿ,
ಹಿರಿತಂದೆಗರಸಾಳ್ಕೆ ನೆಚ್ಚ ತಣಿಸಿ,
ತಂಗಿಯರ ಮೆರಸಿ ಕುಣಿಸಿ,
ಯದುಕುಲದ ಕಲ್ಪವೃಕ್ಷದ ಫಲದ ಸೊದೆಯೆನಿಸಿ ಮನೆಮನೆಯನುಣಿಸಿ,
ತುಂಬುತಿದೆ, ನೆರೆಯುತಿದೆ, ನೋಡಿ, ಆ ಬೆಳಕು !
ಆಳ ಬಾಳಲ್ಲಾ?
ನೋವು ನಲಿವಲ್ಲಾ ?
ಪಾವು ಚಂದ್ರಂಗಿಲ್ಲ ? ಕೋಳು ಸೂರ್ಯಂಗಿಲ್ಲ ?
ದೇವರ್ಗಮೆಡರುತೊಡರಿಲ್ಲಾ ?
ತಂದೆಯಿರ್ವರ ಸೆಳೆದು ತಂದನೇ ಅಳಲ ವಿಧಿ !
ನೊಂದನೇ ನಮ್ಮ ನಿಧಿ !
ನೊಂದು, ನೋವನು ನುಂಗಿ, ಮುಂಬರಿಯುತಿದೆ, ಅಚ್ಚ ಬೆಳಕು !
ಕೆಚ್ಚೆದೆಯ ಬೆಳಕು !
ಕಣ್ಣೀರ ತೊಡೆದು, ಮಿಡಿದು,
ತಣ್ಣನೆಯ ಹರಕೆಗಳ ಹೊನ್ನ ಮುಡಿ ಮುಡಿದು,
ತನ್ನ ಹೊಣೆಗಳ ಹೊರೆಗೆ ನಾಡವರ ನೆರವ ಕುರಿತಾಳ್ವ ನುಡಿ ನುಡಿದು,
ನಾಡವರ ಬಾಳಾದ ಬಾಳ ಬೆಳಕು,
ನರಸಿಂಹ ಕೃಷ್ಣರಿರ್ವರು ಕೂಡಿ ನೆರೆದರೆನೆ ತೇಜಸ್ವಿಯಾಗಿ,
ಎಳೆಯ ಹೆರೆಯೊಳೆ ತೊಳಗಿ ತುಂಬು ಹೆರೆಯಾಗಿ,
ಸಿರಿಯೊಡೆಯ ಜಯಚಾಮರಾಜೇಂದ್ರನೆಂಬೊಂದು ದಿವ್ಯಮಣಿ ಬೆಳಕು,
ಮೂಡಿ, ಕಳೆಗೂಡಿ,
ಕನ್ನಡದ ಚೆಲುವಿಗದೊ ಬೆಳಗುತಿದೆ, ನೋಡಿ,
ದೈವ ಕೃಪೆ ಕೂಡಿ,
ಬೆಳಗುತಿದೆ ನಮಗಾಗಿ ಆ ದೊಡ್ಡ ಬೆಳಕು,
ಶ್ರೀ ಜಯನ ಬೆಳಕು.
೧೯೪೦ .
==============================
ಅರಮನೆಯ ಒಸಗೆ
ಮಂಗಳಂ, ಮೈಸೂರಿನರಮನೆಗೆ ಮಂಗಳಂ.
ಜಯದ ಹೆಸರಿನ ಚಾಮರಾಜಂಗೆ ಮಂಗಳಂ.
ಮುಮ್ಮಡಿಯ, ನಾಲ್ಮಡಿಯ ದಿವ್ಯ ತೇಜಂಗಳಂ
ಒಮ್ಮುಡಿಯೊಳಾಂತೆಸೆವ ಧೀರಂಗೆ ಮಂಗಳಂ.
ತಂದೆತಾಯ್ ಪಯಿರಿಟ್ಟ ಪುಣ್ಯದ ಫಲಂಗಳೇ,
ಸೋದರನ ಸೌಭಾಗ್ಯದಮೃತ ಕಳಶಂಗಳೇ,
ಲಾವಣ್ಯ ಲಕ್ಷ್ಮಿಯರನಾಳ್ವ ಜಯಲಕ್ಷ್ಮಿಯರೆ,
ರಾಜರೊಲ್ಮೆಯ ಚೆಲ್ವಿ ನೊಡತಿಯರೆ, ಮಂಗಳಂ.
ನಿಮಗಿರಲಿ ನಲಿದಾಡಿ ನಿತ್ಯ ಶುಭಮಂಗಳಂ ;
ದೇವರೀಯಲಿ ಮೆಚ್ಚಿ ನಿತ್ಯೋತ್ಸವಂಗಳಂ.
ಮನೆ ಬೆಳಗಿ, ಸಿರಿ ಬೆಳಗಿ, ಮಕ್ಕಳೆಸಿರಿ ಬೆಳಗಿ,
ಭರತವರ್ಷದ ನುಡಿಯ ಸಾಲಿನಲ್ಲಿ ಮೇಲ್ ಬೆಳಗಿ,
ಸವಿಯುತಿರಿ ನಾಡೆಲ್ಲ ಹರಸುವ ಸುಖಂಗಳಂ.
ಮಂಗಳಂ : ಕನ್ನಡದ ದೊರೆತನಕೆ ಮಂಗಳಂ.
೧೯೪೧.
=============================
ಶುಕ್ರಗೀತೆ
[ಮೈಸೂರು ವಿಶ್ವವಿದ್ಯಾನಿಲಯದ ಬೆಳ್ಳಿಯ ಹಬ್ಬದ ಕವಿಸಮ್ಮೇಳನದಲ್ಲಿ ಓದಿದ್ದು]
ಓಂ, ಸಹ ನಾವವತು ; ಸಹ ನೌ ಭುನಕ್ತು;
ಸಹ ವೀರಂ ಕರವಾವಹೈ ;
ತೇಜಸ್ವಿನಾವಧೀತಮಸ್ತು ;
ಮಾ ವಿದ್ವಿಷಾವಹೈ.
ಓಂ ಶಾಂತಿಃ ಶಾಂತಿಃ ಶಾಂತಿಃ
೧
ಮೊತ್ತಮೊದಲೇ, ಬೆಳಕಾಗಲೆಂದಾಗ, ಬೆಳಕಾಯ್ತು ; ಬೆಳಕು ಚೆಲುವಾಯ್ತು;
ಕಿಡಿ ಸಿಡಿದು ಮಿನುಗಿದುವು ಜ್ಯೋತಿಗಳ್ ; ಮೂಡಿದರು ಸೂರ್ಯ ಚಂದಿರರು
ಲೋಕಚಕ್ಕುಗಳೆನಿಸಿ, ಸತ್ಯ ಧರ್ಮಗಳಂತೆ, ಕ್ಷಮೆ ದಯೆಗಳಂತೆ.
ಹಸುರ ಸೊಬಗಂ ತೊಟ್ಟು, ಹಾಡುತ್ತ, ಬಾನ್‌ಬಯಲೊಳಾಟವಾಡುತ್ತ,
ಸೌಂದರದಿಂ ತೀವಿ, ಭೂದೇವಿ ಬೆಳಗಿದಳು, ಜೀವ ಪರಮಾತ್ಮ ತೊಳಗಿ.
ಆ ದಿವ್ಯ ದರ್ಶನಂ ಕಣ್ಮುಂದೆ ನೋಡಿದರ್
ದಿವಿಜರುಂ, ಋಷಿಗಳುಂ ; ನಲಿದು ಕುಣಿದಾಡಿದರ್ ;
ಪಾಟಮಂ ಪಾಡಿದರ್-,
ಓಂ, ತತ್ಸವಿತುರ್ ವರೇಣಿಯಂ
ಭರ್ಗೋ ದೇವಸ್ಯ ಧೀಮಹಿ,
ಧಿಯೋ ಯೋ ನಃ ಪ್ರಚೋದಯಾತ್.
ಮತ್ತಮವರಿಂತೆಂದು ಬೇಡಿದರ್-
ಹಿರಣ್ಮಯೇನ ಪಾತ್ರೇಣ
ಸತ್ಯಸ್ಯಾಪಿಹಿತಂ ಮುಖಂ ;
ತತ್ ತ್ವಂ ಪೂಷನ್ ಅಪಾವೃಣು
ಸತ್ಯಧರ್ಮಾಯ ದೃಷ್ಟಯೇ.
ಇನ್ನು ಮೊಂದಂ ಬಯಸಿ ಪೂಟಮಂ ಪೂಡಿದರ್-
ಅಸತೋ ಮಾ ಸದ್ಗಮಯ,
ತಮಸೋ ಮಾ ಜ್ಯೋತಿರ್‌ಗಮಯ,
ಮೃತ್ಯೋರ್ ಮಾ ಅಮೃತಂ ಗಮಯ,
ಇಂದಿಂಗಮೆಮಗದುವೆ ದರ್ಶನಂ, ಬಯಸಿದುದೆ ಆ ಅಮೃತಪುತ್ರರ್.
ಬ್ರಹ್ಮ ಮೀ ವಿಶ್ವಂ ; ಬ್ರಹ್ಮಮುಂ ಪೂರಮೆನೆ ಏನ್ ಚೆಲುವೊ ನಮ್ಮ ಬಾಳ್ ಚೆಲುವು,
ಏನ್ ನಲಿವೊ ನಮ್ಮ ನಲಿವಾತ್ಮನಾನಂದಂ !
೨
ಆನಂದನರಿಯದರ್,
ಆತ್ಮವನೆ ಒಲ್ಲದರ್,
ಬಾನ ಗಡಿಯಲಿ ಗಿಡಿದ ಕತ್ತಲೆಯ ಗುಹೆಯೊಳಡಗಿರ್ದರಾ ಅಸುರರ್
ಕೇಳ್ದರಾ ಪಾಟಮಂ ಪಲ್ಮೊರೆದು, ಕಣ್ಣಿರಿಯೆ ಕಂಡರಾ ಬಿಡುಗಣ್ಣ ಬೆಳಕನ್,
ಪೊಳೆದು ಪೊಳೆಯಿಸುತಿರ್ಪ ಬಿಳಿಯ ಬಾನ್‌ಬೆಳಕನ್.
ಮೆಲ್ಲಮೆಲ್ಲನೆ ನುಸುಳಿ ದೇವರಾವರಣದಲಿ, ಆಳ ತೋಟದಲಿ,
ತೆಕ್ಕೆ ತೆಕ್ಕೆಯೊಳೆದ್ದು ಹೊರಬಿದ್ದು, ಕಾರಿರುಳ ಮೊತ್ತಂಗಳಾಗಿ,
ಪೊಗೆಯಾಗಿ, ನೊಣೆವ ಪಡಿನೆಳಲಾಗಿ, ನಂಜಾಗಿ, ಕಣ್ಣ ಮಂಜಾಗಿ,
ಮುತ್ತಿ ಮರುಳ್ಗೊಳಿಸಿದರ್ ಸಂಶಯಂಗಳನೊತ್ತಿ, ಪಾಪಮಂ ಬಿತ್ತಿ,
ಅಲ್ಲದುದನಹುದೆಂದು, ಅಹುದನಲ್ಲೆಂದು,
ಇಲ್ಲದುದನಿಹುದೆಂದು, ಇಹುದನಿಲ್ಲೆಂದು,
ನಲ್ಲದಂ ಪೊಲೆಯೆಂದು, ಪೊಲೆ ನಲ್ಲದೆಂದು,
ತಿರಿಸಿದರ್ ಮಾಯಾವಿಗಳ್ ಬಾಳ್ವ ಮಕ್ಕಳಂ ಸಾವ ಸಂಸಾರ ಸುತ್ತಿ,
ಪಲ ತೆರನ್, ಪುರುಳೊಂದು,
ಪಲ ತೆರನ್, ನೆರಸಿಂದು-
ಅಹಿ, ವೃತ್ರ, ಮಾರ, ಕಲಿ, ಅಹಿಮನ್, ಸೈತಾನ್ !
೩
ಅಂದು ಮೊದಲಾದುದೇ ದೇವಾಸುರಂ!
ಎಂದು ಕೊನೆಗಾಣ್ಬುದೋ ದೇವಾಸುರಂ!
ಪಸುಳೆವೋಲ್ ನಿಲ್ದಾಳ ನಿಲವು !
ಏನ್ ಚೆಲ್ಲು ಚೆಲ್ವು !
ಓ ಪಂಪ, ನೀನ್ ತುಂಬಿ ತೊರೆದೊಱತೆ ಪರಿವುದಿನ್ನು೦.
ಸಾವಿರಂ ಸಂದುವುದು ಸರಿವುದಿನ್ನುಂ.
ಅದನೆ ಬಸವಣ್ಣನ್,
ಅದನೆ ಕುವರವ್ಯಾಸನ್
ಇನ್ನೊಮ್ಮೆ ಸಾರಿದರ್ ತಮ್ಮ ಕಣ್ಣಿನ್ ಕಂಡು
ಪೊಸಪೊಸತು ಪರಿಯಿನ್,
ಆಳ ಬಾಳನ್ ಕಡೆವ ಶಿವಕಲೆಯ ಕೃಪೆಯಿನ್ :
ಅದು ಶಿವಂ, ಸತ್ಯಮದು, ಸುಂದರಂ.
ಗುರು ಪಂಪ, ಓ ತಂದೆ ಪಂಪಾ,
ತೆಂಕನಾಡನ್ ಮರೆಯಲಾರದೆಲೆ ಜೀವಾ,
ಮರೆಯದಿರು, ಪರಸು, ಪರಸೆಮ್ಮನ್.
ಪಳೆಯ ಕರ್ನಾಟಕಂ ಮತ್ತೊರ್ಮೆ ಕಟ್ಟುಗೆ !
ಎಳೆಯ ಕರ್ನಾಟಕಂ ಪೊಸಪುಟ್ಟು ಪುಟ್ಟುಗೆ !
ಪಿರಿಯತನಮನ್ ಮರೆತ ಕಿರುಮಕ್ಕಳನ್ ಪರಸು,
ಪರಸು ನೀನೆಮ್ಮನ್.
೧೯೪೧.
================================
ಪಂಪನ ಒರತೆ
(ಸಾವಿರ ವರ್ಷದ ಹಬ್ಬದಲ್ಲಿ)
ಪದಿನೂರು ನೆರೆಯೆ, ಪಿರಿದೊಸಗೆ ಮೆರೆಯೆ,
ಪುಲಿಗೆರೆಯ ತಿರುಳ ಕನ್ನಡದ ಪುರುಳ
ರಸರಸದ ಬಾವಿ ಮನೆಮನೆಗೆ ತೀವಿ
ತನ್ನೆರಡು ಪಾಟ್ಟು ಮೆಸೆಯೆ, ನೆಲನೊಸೆಯೆ,
ತನ್ನ ಸೆರಪೇ ಸೆರಪು,
ತನ್ನ ತೇಜಮೆ ತೇಜಮ್
ಎನೆ ಬೆಳಪ ಪಂಪನ್
ಎಮ್ಮ ತಾಯ್ನುಡಿಗೀಗೆ ಪೊಸಪೊಸತು ಪೊಂಪನ್ !
ಓ ಪಂಪ, ಗುರುಪಂಪ, ಏನ್ ನೋನ್ತ ನೋನ್ಪಿಯೋ,
ಏನ್ ಪಾರ್ತ ಪಾರ್ಪೋ,
ಕಡೆದಿಟ್ಟೆ ಕಬ್ಬದೊಳ್ ಸಂಸಾರಸಾರಮನ್,
ಮಾನಮನ್, ದಾನಮನ್, ಧೀರ ಗಾಂಭೀರ್ಯಮನ್,
ಧರ್ಮಮನ್, ಕರ್ಮಮನ್, ಶಿವಸದದ ಮರ್ಮರಮನ್,
ಸರ್ವಸ್ವಮನ್ !
ನಿನ್ನು ಸಿರ್ ತುಂಬಿ,
ನಂಬುವುದೆ ನಂಬಿ,
ರನ್ನನುಂ, ಚಾವುಂಡರಾಯನುಂ ಕಂಡರ್
ಬೆಳ್ಳೋಳದ ಕಗ್ಗಲ್ಲ ಕೋಡಿನೊಳ್ ದೇವರಾ ಬಿಂಬಮನ್,
ಕಂಡು ಕಡೆದಿಟ್ಟರ್
ಪಾರುವಾ ಪಾರ್ಪೊಂದನಿಳೆಗೆ ತಡೆದಿಟ್ಟರ್-
ಕಲೆಯ ಸೌಂದರ್ಯಂ, ಜೀವದೌನ್ನತ್ಯಂ,
ತಪದೊಂದು ಭಾಗ್ಯಂ, ಕ್ರಾಂತಿಯೊಳ್ ಶಾಂತಿ,
ಪಸುಳೆವೋಲ್ ನಿಲ್ವಾಳ ನಿಲವು !
ಏನ್ ಚೆಲ್ವು ಚೆಲ್ವು !
ಓ ಪಂಪ, ನೀನ್ ತುಂಬಿ ತೊರೆದೋರೆತೆ ಪರಿವುದಿನ್ನು೦.
ಸಾವಿರಂ ಸಂದುಮದು ಸರಿವುದಿನ್ನುಂ
ಅದನೆ ಬಸವಣ್ಣನ್,
ಅದನೆ ಕುವರವ್ಯಾಸನ್
ಇನ್ನೊಮ್ಮೆ ಸಾರಿದರ್ ತಮ್ಮ ಕಣ್ಣಿನ್ ಕಂಡು
ಪೊಸಪೊಸತು ಪರಿಯಿನ್,
ಆಳ ಬಾಳನ್ ಕಡೆವ ಶಿವಕಲೆಯ ಕೃಪೆಯಿನ್ :
ಅದು ಶಿವಂ, ಸತ್ಯಮದು, ಸುಂದರಂ.
ಗುರು ಪಂಪ, ಓ ತಂದೆ ಪಂಪಾ,
ತೆಂಕನಾಡನ್ ಮರೆಯಲಾರದೆಲೆ ಜೀವಾ,
ಮರೆಯದಿರು, ಪರಸು, ಪರಸೆಮ್ಮನ್,
ಪಳೆಯ ಕರ್ನಾಟಕಂ ಮತ್ತೊರ್ಮೆ ಕಟ್ಟುಗೆ !
ಎಳೆಯ ಕರ್ನಾಟಕಂ ಪೊಸಪುಟ್ಟು ಪುಟ್ಟುಗೆ !
ಪಿರಿಯತನಮನ್ ಮರೆತ ಕಿರುಮಕ್ಕಳನ್ ಪರಸು,
ಪರಸು ನೀನೆಮ್ಮನ್.
೧೯೪೧.
=========================
ಧರ್ಮಯುದ್ದ
(ಮಯಿ ಸಂನ್ಯಸ್ಯ ಯುದ್ಧಸ್ವ)
ಮಂಗಳಂಗಳನಿಳೆಯ ಸತ್ವ ಜ
ನಂಗಳಿಗೆ ನಲಿದೀವ ನಿತ್ಯನೆ,
ಮಂಗಳಾತ್ಮನೆ, ಕೃಪೆಯ, ಮುಕ್ತರ ಬೀಡೆ, ಕಾಪಾಡು.
ಕಂಗೆಡುವ ಮದದುಬ್ಬಿನಲಿ ರಣ
ದಂಗಣದ ಕಾಚ್ಚನೆಬ್ಬಿಸಿ
ಭಂಗಪಡುವ ದುರಾಸೆಯಡಗಿಸಿ ನಡಸು ಮಕ್ಕಳನು.
ಹಿಂದೆ ಅಸುರರು ಕೊಬ್ಬಿ, ಸುರನರ
ರಂದಬಾಳನು ಮೆಟ್ಟಿ , ಹಿಂಸಾ
ನಂದ ಯೋಗಿಗಳಾಗಿ ಭೂಮಿಗೆ ಭಾರವೆನಿಸಿರಲು,
ತಂದೆ, ನೀ ಮಾಧವನುಮಾಧವ
ನೆಂದು ಪರಿಪರಿ ಪೊಗಳೆ, ಕರಗಿದೆ,
ನೊಂದೆ, ಬಿಡಿಸಿದೆ ಲೋಕಕಂಟಕರಿಂದ ಭಕ್ತರನು.
ಯುದ್ಧವೆಂಬ ಪಿಶಾಚ ಯಜ್ಞಕೆ
ಬದ್ಧರಹ ರಾಕ್ಷಸರ ಸಾಹಸ
ಬುದ್ದಿ ಕೌಶಲವೇಕೆ ? ಐಸಿರಿಯೇಕೆ ? ಬಿಸುಡು, ಸಡು !
ಯುದ್ಧವೇ ತಂದೊಡ್ಡೆ, ಯುದ್ಧವ
ಯುದ್ಧದಿಂದಲೆ ಯಜ್ಞಮಾಡುವ
ಸಿದ್ದಿಯನು ನೀ, ದೇವ, ಬೆಸಸಿದೆ ಜಗವನುದ್ಧರಿಸೆ.
ಬೇಡುವೆವು, ಬಾ, ಸುಜನಪಾಲಕ.
ಹೂಡು ಧರ್ಮವ, ಧರ್ಮರಕ್ಷಕ,
ನಾಡ ಕಾವಲ ದಳಕೆ ಕೂಡಲಿ ನಾಡ ಬಲವೆಲ್ಲಾ
ಓಡಿಹೋಗಲಿ ಭಯದ ನುಡಿಗಳು,
ಮೂಡಿ ತೂಗಲಿ ನಗುತ ಬೆಳೆಗಳು,
ನೀಡು ದಯವನು ದಣಿಗೆ, ನೆಮ್ಮದಿ ಬದುಕ ಬಡವನಿಗೆ-
ಕೆಣಕಿದರೆ ಬಿಡದೆತ್ತಿಕೊಂಡೆವು-
ಮಣಿವೆವೇ ನಾವಿನ್ನು ? ಕಾಳಗ
ದಣಿಗೆ ಮುಡಿಪಾಗಿಟ್ಟು ತನುಮನಧನವ ತೇಯುವೆವು !
ಋಣವಿದಲ್ಲವೆ ಭರತಮಾತೆಯ ?
ಋಣವಿದಲ್ಲವೆ ದೇವಪಿತೃಋಷಿ
ಗಣದ ? ಮಡಿದಾ ಸತ್ಯಧರ್ಮ ಸ್ವತಂತ್ರ ಸಾಧಕರ ?
ಗೆದ್ದು ಬಿಟ್ಟೆವು ! ಹುಬ್ಬ ಹಾರಿಸಿ-
ಮದ್ದು ಗುಂಡನು ಸುರಿಸಿ, ಹೊಸ ಹುಸಿ
ಸುದ್ದಿಗಳ ತೂರಾಡಿ, ನಂಬಿಸಿ, ಕೆಂಡಮಳೆಗರೆದು,
ಬಿದ್ದು ಹೆಣ್ಗಳ ಮೇಲೆ, ಹಸುಳೆಯ
ಗುದ್ದಿ, ದಾಸ್ಯವ ಹೊರಿಸಿ-ನಲಿವಿರ
ಗೆದ್ದು ಬಿಟ್ಟೆವು ! ಎನುತ ?-ಗೆಲುವಿರ ನೀವು ದೇವರನು !
ಗೆಲವು ನಮ್ಮದು, ಮಾಯಕಾರರೆ !
ಗೆಲವು ನಮ್ಮದು, ದ್ರೋಹಿಗಳೆ ! ಕಡೆ
ಗೆಲವು ನಮ್ಮದು, ನಮ್ಮ ದಿವ್ಯ ಜ್ಯೋತಿ ನಮಗಿಹನು ;
ಗೆಲವು ಶ್ರೀ ಜಯಚಾಮರಾಜಗೆ !
ಗೆಲವು ಬಿಡುತೆಗೆ, ಸಾಧು ಜನತೆಗೆ,
ಗೆಲವು ಶಾಂತಿಯ ಸರ್ವಸಮತೆಯ ಸುಖದ ಜೀವನಕೆ !
ಮಂಗಳಂಗಳನಿಳೆಯ ಸರ್ವವ ಜ
ನಂಗಳಿಗೆ ನಲಿದೀವ ನಿತ್ಯನೆ,
ಮಂಗಳಾತ್ಮನೆ, ಒಲವೆ, ಮುಕ್ಯರ ನಲಿವೆ, ಕಾಪಾಡು.
ಕಂಗೆಡುವ ಮದದುಬ್ಬಿನಲಿ ರಣ
ದಂಗಣದ ಕಾಚ್ಚನೆಬ್ಬಿಸಿ
ಭಂಗಪಡುವ ದುರಾಸೆಯನ್ನು ಮುರಿ, ಗೆಲಿಸು ಶಾಂತಿಯನು.
ಓಂ ಶಾಂತಿಶ್ಯಾಂತಿ ಶಾಂತಿಃ
೧೯೪೩.
===================================
ಶಿಲಪ್ಪದಿಗಾರಂ
ಶ್ರೀಯವರು ತಮಿಳು ಸಾಹಿತ್ಯದ ಸಾರವನ್ನು ಕನ್ನಡಿಗರಿಗೆ ಒದಗಿಸಿಕೊಡಬಯಸಿ ಒಂದೆರಡು ಮಹಾಗ್ರಂಥಗಳನ್ನು ಕನ್ನಡಕ್ಕೆ ಇಳಿಸಿದ್ದರು. ನಮ್ಮ ದುರ್ದೈವದಿಂದ ಎಲ್ಲವೂ ಗೆದ್ದಲಪಾಲಾಗಿ ಒಂದೆರಡು ತುಣುಕುಗಳು ಮಾತ್ರ ಉಳಿದಿವೆ. “ ಶಿಲಪ್ಪದಿಗಾರಂ " ಎಂಬ ಪ್ರಸಿದ್ದ ತಮಿಳು ಕಾವ್ಯದ ಕನ್ನಡ ಭಾಷಾಂತರಕ್ಕೆ ಮುನ್ನುಡಿಯಾಗಿ ಬರೆದುವು ಈ ಹದಿನೇಳು ಸಾಲುಗಳು.
ಮುನ್ನುಡಿ
ಕೂರ ಕಲೆಮಗಳ್ ಅರಸು ತೊರೆದಿರ್ದ
ಚೇರಲ್ ಇಳಂಗೋವಡಿಗಳ್ ಅರುಳ,
ಮುತ್ತ ಮಿಳ್ ಪಾಟ್ಟೆನ ತಮಿಳ್‌ಮಗಳ್ ಪತ್ತ
ನುಣ್ ತಣ್‌ಬೆಳಗಿನ ಮುತ್ತಿನಮಣಿಯನ್
ಆರಾ ಅವರ್ದೆನ ತೀರಾ ತಣವಿನ್,
ಇನ್ನು೦ ತನ್ ಪೋಲ್ ಕನ್ನಡ ಮಕ್ಕಳ್
ಅರುಂಪೆರಲ್ ಕಾದಲ್ ಪೆಣ್ಣಣಿ ಕಲ್ಪಿನ್
ತಿರುಮಾಪನಿ ಕಣ್ಣಕಿ ತೊಳುತು
ಅರಿವೆನ ಅರನೇ, ಅರನೆನ ಅರುಳೇ
ಎಂದರಿನಾಲ್ವಾಳ್ ಬಲ್ವಿಡಿವಿಡಿಗೆನ,
ಕಂಡ ಕಂಡ ಮಲರ್ ಚೆಲ್ವನೆ ಕೊಂಡು
ಬಂಡುಣಿ ತನತೇ ಜೇನೀನ್ಬಂತು,
ಕಂಡೆಡೆ, ಕಂಡೆಡೆ ಚೆಲ್ವಗಳಾಯ್ತು
ತೆರಳ್ಚಿ ಮನೆಕಡೆ ತರ್ಪೋನ್, ತಂದನ್
ತಾಯ ಕಯ್ಯೋಳಿಗೆ ಶ್ರೀಯೆಂಬೊರ್ವನ್-
ಬೇಡುವನೊಂದನ್ ನಲವಿಂದೀಯೆ,
ಒಲ್ವ ಮಕ್ಕಳೊಳ್ ಚೆಲ್ಪನಿಡು ತಾಯೆ !
=======================
ಹಾರೈಕೆ
ಮದರಾಸು ನಗರದಲ್ಲಿ ಸೇರಿದ ೨೯ನೆಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಳಿಸಿದ ಹಾರೈಕೆ.
೧. ಕನ್ನಡನುಡಿಸಯಿರ್ ಮುನ್ನಡೆ ತೆನೆತುಂಬಿ,
ಪೊನ್ನಡಕಿಲ್ಬಂ ಪೊನ್ನಕೈ.
೨. ಬೀಡುಂ ಬಯಲ್ ಮಲೆ ಕುಡಿವಾಳ್ಕೆ ಕರ್ಬು ಜೇನ್
ಪಾಡುಂ ಪಿಳಿಗೆ ಮೇಣ್ ಬಿಡಿನುಡಿಯುಂ.
೩. ಬರೆವರ ಬಾಯೊಳೊಲವಿರ್ಕೆ, ಚೆಲುವಿರೆ.
ನಲವಿರ್ಕೆ, ನಾಡ ಗೆಲವಿರ್ಕೆ,
೪. ಧಮ್ಮದ ತಿರುಳಿರ್ಕೆ, ಕರ್ಮದ ಕೆಚ್ಚಿರ್ಕೆ,
ಪರ್ಮೆ, ಬಿಗಿ, ನಗೆ, ಸೊಗಸು.
೫, ಅರುಳಿರ್ಕೆ, ವೀಡುಂ, ಅರಂ, ಹುರುಳಿಂಪು,
ಅರಿವಾಟಂ, ಪಾಟಂ ಪೊಸನೋಟಂ,
೬, ಒರ್ನಾಡು ಕೂಡುಗೆ ತಾನೇ ಒರ್ ಪೆರ್‌ಲೋಕಂ-
ಕಾರ್ನಾಡು ಕಂಡು ಕಾಣ್ಕೆಗಳನ್.
೭. ಕನ್ನಡ ಕಣ್ಮಣಿಗಳ್ ಪೆಣ್ಮಣಿಗಳ ಕಟ್ಟಾಳ್ಗಳ್
ಚೆನ್ನನೆಯ ಬಾಳ್ಗೆ ಬೆಳಕಕ್ಕೆ.
೮. ಕನ್ನಡ ತಾಯ್ ವಾಳ್ಗೆ, ವಾಳ್ಗೆ ಚೆಂದಮಿಳುಂ,
ಕೂಡಿದೀ ಚೆನ್ನೈಮಾನಾಡು.
೯. ಪಳವಾನೇ ! ಪೊಸಬಲರೇ ! ತಳಿಮಳೆಯೇ ! ಚೆಲ್ವು ಬೆಳೆಯೆ !
ಒಳಗಣ್ಣ ಪಾರ್ವೆಯೆ ! ನೆನೆಯಿರೆ ನಮ್ಮ ಪೊಲನುಂ.
೧೦. ಶ್ರೀಯೆಂಬೊನೊಲ್ವನ್ ಅಡಿಯೆನೆನ್ ಕಾಯೆಂದು
ಬೇಳ್ಪನ್ ಪರಮಾತ್ಮನನ್.
೧೯೪೫. -ದ್ರಾವಿಡಗಣ-ತ್ರಿಪದಿ, ಕುರಳು ಧಾಟಿ

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ